Featured

ಮಂಗಳೂರು : ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್ ‌ಹಸುರು ನಿಶಾನೆ -Vishwanews24

ಮಂಗಳೂರು : ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್ ‌ಹಸುರು ನಿಶಾನೆ -Vishwanews24

ಮಹಾನಗರ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್‌ ಸೋಮವಾರ ಹಸುರು ನಿಶಾನೆ ತೋರಿಸಿದ್ದು, ಅಲ್ಲಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಮಂಗಳವಾರದಿಂದ ಪ್ರಾರಂಭಗೊಳ್ಳುವ ಸಾಧ್ಯತೆಯಿದೆ.

ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜ ನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯಲ್ಲಿ ನಿರ್ಮಾಣ ಹಂತದ ತ್ಯಾಜ್ಯ ನಿರ್ವಹಣೆಯನ್ನು ಸಮ ರ್ಪಕವಾಗಿ ಮಾಡುತ್ತಿಲ್ಲ ಎನ್ನುವ ಆರೋಪದ ಮೇಲೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಯಾಗಿದ್ದು, ಈ ಅರ್ಜಿ ವಿಚಾರಣೆ ವೇಳೆ, ನಿರ್ಮಾಣ ತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಂಡುಕೊಳ್ಳುವವರೆಗೆ ಪ್ರಗತಿಯಲ್ಲಿರುವ ಕಾಮಗಾರಿಕೆಯನ್ನು ಮುಂದುವರಿಸುವುದು ಬೇಡ ಎನ್ನುವ ಅಭಿಪ್ರಾಯವನ್ನು ನ್ಯಾಯಾ ಲಯ ನೀಡಿತ್ತು. ಅದರಂತೆ, ಹಲವೆಡೆ ಪ್ರಗತಿಯಲ್ಲಿದ್ದ ಒಳಚರಂಡಿ, ರಸ್ತೆ ಕಾಂಕ್ರೀಟ್‌ ಕಾಮಗಾರಿ ಸಹಿತ ಸುಮಾರು 34 ರೀತಿಯ ಕಾಮಗಾರಿಗಳನ್ನು ಎರಡೂವರೆ ತಿಂಗಳಿನಿಂದ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಅಂದರೆ ಫೆಬ್ರವರಿ ತಿಂಗಳಲ್ಲಿ ಪರಿಣತ ರಾಷ್ಟ್ರೀಯ ಪರಿಸರ ಎಂಜಿನಿಯರ್‌ ಸಂಸ್ಥೆಯ (ನೀರಿ) ತಂಡವು ಮಂಗಳೂರಿಗೆ ಭೇಟಿ ನೀಡಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ವಾಸ್ತವಾಂಶವನ್ನು ಪರಿಶೀಲಿತ್ತು. ಅಲ್ಲದೆ, ಈ ಬಗ್ಗೆ ಸಮೀಕ್ಷೆ ನಡೆಸಿದ ತಂಡವು, ಮಂಗಳೂರಿನಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಚಟುವಟಿಕೆಗಳ ತ್ಯಾಜ್ಯ ವಿಲೇವಾರಿ ಅಸಮರ್ಪಕವಾಗಿದೆ ಎಂದು ಅಭಿಪ್ರಾಯಪಟ್ಟು ಸ್ಮಾರ್ಟ್‌ ಸಿಟಿ ಕಾಮಗಾರಿಯನ್ನು ಮುಂದು ವರಿಸ ಬೇಕಾದರೆ ಕೆಲವೊಂದು ಷರತ್ತುಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿತ್ತು.

ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

“ನೀರಿ’ ತಂಡದ ವರದಿಯಲ್ಲಿ ಉಲ್ಲೇಖೀಸಿರುವ ಷರತ್ತು ಪಾಲಿಸಿಕೊಂಡು ಕಾಮಗಾರಿ ಮುಂದುವರಿಸಲು ಸಿದ್ಧವಿರು ವುದಾಗಿ ಸರಕಾರವು ನ್ಯಾಯಾಲಯಕ್ಕೆ ತಿಳಿಸಿತ್ತು. ನಿರ್ಮಾಣ ಚಟುವಟಿಕೆಗಳ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕೆಲವು ಮಾನದಂಡಗಳಿದ್ದು, ಅವುಗಳ ಪ್ರಕಾರವೇ ವಿಲೇವಾರಿ ಮಾಡುವ ಬಗ್ಗೆ ಮುಚ್ಚಳಿಕೆ ಬರೆದುಕೊಡಬೇಕೆಂದು’ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅದರಂತೆ ಸ್ಮಾರ್ಟ್‌ ಸಿಟಿ ವತಿಯಿಂದ ಹೈಕೋರ್ಟ್‌ಗೆ ಮುಚ್ಚಳಿಕೆ ಬರೆದು ಸಲ್ಲಿಸಲಾಗಿತ್ತು. ಸೋಮವಾರ ಹೈಕೋರ್ಟ್‌ ಈ ಮುಚ್ಚಳಿಕೆಯಲ್ಲಿನ ವಿವರಗಳನ್ನು ಪರಿಶೀಲಿಸಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಮುಂದು ವರಿಸಬಹುದೆಂದು ಆದೇಶ ನೀಡಿದೆ.

ಸ್ಮಾರ್ಟ್‌ಸಿಟಿ ಯೋಜನೆಯ ಕಾಮಗಾರಿಗಳಲ್ಲಿ ನಿಯಮ ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲನೆ ನಡೆಸಲು ಹೈಕೋರ್ಟ್‌ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರಿಸರ ಎಂಜಿನಿಯರ್‌ ಸಂಸ್ಥೆಯ (ನೀರಿ) ಮೂವರು ತಜ್ಞರನ್ನು ಒಳಗೊಂಡ ತಂಡ ಕಳೆದ ಜನವರಿ ಕೊನೆಯ ವಾರದಲ್ಲಿ 3 ದಿನಗಳ ಕಾಲ ಮಂಗಳೂರಿನ 34 ಕಡೆಗಳಲ್ಲಿ ಪರಿಶೀಲನೆ ನಡೆಸಿತ್ತು. ಪಚ್ಚನಾಡಿಗೂ ತಂಡ ಭೇಟಿ ನೀಡಿತ್ತು. ಮಂಗಳೂರು ನಗರದಲ್ಲಿ ಯಾವೆಲ್ಲ ಕಡೆಗಳಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಸ್ಮಾರ್ಟ್‌ಸಿಟಿ ಕಾಮಗಾರಿ ಯಾವ ಹಂತದಲ್ಲಿದೆ, ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ನೀರಿ ತಂಡದ ಸದಸ್ಯರು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಂದ ಮಾಹಿತಿ ಪಡೆದು ವಾಸ್ತವ ಸ್ಥಿತಿಯ ವರದಿಯನ್ನು ಫೆಬ್ರವರಿ ಯಲ್ಲಿ ಹೈಕೋರ್ಟಿಗೆ ಸಲ್ಲಿಸಿದ್ದರು.

ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24

ಮಳೆಗಾಲ ಪ್ರಾರಂಭಕ್ಕೂ ಮುನ್ನ ಮುಗಿಯಲಿ
ಕಳೆದ ಎರಡೂವರೆ ತಿಂಗಳಿನಿಂದ ನ್ಯಾಯಾಲಯದ ತೀರ್ಮಾನ ಪ್ರಸ್ತಾವಿಸಿ ನಗರದೆಲ್ಲೆಡೆ ಸ್ಮಾರ್ಟ್‌ ಸಿಟಿ ಕಾಮಗಾರಿ ಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಕಾಮಗಾರಿ ಮುಂದು ವರಿಸುವುದಕ್ಕೆ ಅನುಮತಿ ನೀಡಲಾಗಿದ್ದು, ಬಾಕಿಯಾಗಿರುವ ಕಾಮಗಾರಿಗಳು ಶೀಘ್ರ ಪ್ರಾರಂಭವಾಗುವ ನಿರೀಕ್ಷೆಯಿದೆ. ಗಮನಾರ್ಹವೆಂದರೆ, ಇನ್ನು ಮಳೆಗಾಲ ಪ್ರಾರಂಭಕ್ಕೆ ಕೇವಲ ಎರಡೂವರೆ ತಿಂಗಳಷ್ಟೇ ಇದ್ದು, ಅಷ್ಟರೊಳಗೆ ಕೆಲವೊಂದು ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಹುದೊಡ್ಡ ಸವಾಲು ಹಾಗೂ ಹೊಣೆಗಾರಿಕೆ ಸ್ಮಾರ್ಟ್‌ಸಿಟಿ ನಿಗಮದ ಮುಂದೆಯಿದೆ. ಏಕೆಂದರೆ, ಈಗಾಗಲೇ ಕೈಗೆತ್ತಿಕೊಳ್ಳಲಾಗಿದ್ದ 34 ಕಾಮಗಾರಿಗಳ ಪೈಕಿ ಕೆಲವೊಂದನ್ನು ಮಳೆ ಪ್ರಾರಂಭಕ್ಕೂ ಮೊದಲೇ ಮುಗಿಸದೆ ಹೋದರೆ, ನಗರವಾಸಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಿರುವಾಗ, ಸ್ಮಾರ್ಟ್‌ಸಿಟಿ ನಿಗಮವು ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಸೀಮಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂಬುದು “ಸುದಿನ’ ಕಾಳಜಿಯಾಗಿದೆ.

ತತ್‌ಕ್ಷಣ ಕಾಮಗಾರಿ ಶುರು
“ನೀರಿ’ ತಂಡದ ವರದಿ ಆಧಾರದಲ್ಲಿ ಮುಂದುವರಿಯುತ್ತೇವೆ ಎಂಬುದಾಗಿ ನಾವು ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌ (ಎಸ್‌ಒಪಿ) ಸಿದ್ಧಪಡಿಸಿ ನ್ಯಾಯಾ ಲಯಕ್ಕೆ ಸಲ್ಲಿಸಿದ್ದೆವು. ಅದನ್ನು ಪರಿಶೀಲಿಸಿದ ನ್ಯಾಯಾಲಯವು ಇದೀಗ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಮುಂದುವರಿಸಬಹುದೆಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ತತ್‌ಕ್ಷಣದಿಂದ ಕಾಮಗಾರಿ ಆರಂಭಿಸಲಾಗುವುದು. ಮಳೆಗಾಲ ಸಮೀಪಿಸುವುದರ ಒಳಗಾಗಿ ಪ್ರಮುಖ ಕಾಮಗಾರಿಗಳನ್ನು ಮುಕ್ತಾಯ ಮಾಡುವ ನಿಟ್ಟಿನಲ್ಲಿ ತ್ವರಿತವಾಗಿ ಕೆಲಸ ನಡೆಸಲಾಗುವುದು.

-ಪ್ರೇಮಾನಂದ ಶೆಟ್ಟಿ, ಮೇಯರ್

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago