Featured

ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗ : ಅಬ್ದುಲ್ ರವೂಫ್ ಆರೋಪ -Vishwanews24

ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗ : ಅಬ್ದುಲ್ ರವೂಫ್ ಆರೋಪ -Vishwanews24

ಮಂಗಳೂರು, : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗವಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ವಿಪಕ್ಷದ ಮುಖ್ಯ ಸಚೇತಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಯ ರಥಬೀದಿಯ ಬಳಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆ ನಿರ್ಮಾಣವಾದ ಎರಡು ತಿಂಗಳ ಒಳಗೆ ಬಿರುಕು ಬಿಟ್ಟಿದೆ. ಕೆಲವು ಕಡೆ ಬಿರುಕು ಬಿಟ್ಟ ಕಾಂಕ್ರಿಟ್ ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭದಲ್ಲೂ ಹಲವು ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದರು.

ಒಂದೂವರೆ ಕೋಟಿ ರೂ.ನ ಕಾಮಗಾರಿ ವ್ಯರ್ಥ:

ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪುರಭವನದ ಬಳಿಯ ನೆಹರು ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ಸುಮಾರು ಒಂದೂವರೆ ಕೋಟಿ ರೂ. ವ್ಯಯ ಮಾಡಲಾಗಿದೆ. ಆದರೆ ಈ ಮೈದಾನವನ್ನು ಫುಟ್ಬಾಲ್ ಮೈದಾನವಾಗಿ ಉಳಿಸಿಕೊಳ್ಳಬೇಕು, ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಕೋಟ್ಯಂತರ ರೂ. ಸಾರ್ವಜನಿಕ ಹಣ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪೋಲಾದಂತಾಗಿದೆ. ನಗರದ ವಿವಿಧ ಕಡೆ ನಡೆಯುತ್ತಿರುವ ಕಾಮಗಾರಿಗಳೂ ಸಮರ್ಪಕವಾಗಿಲ್ಲ ಎಂದು ಅಬ್ದುಲ್ ರವೂಫ್ ದೂರಿದರು.

http://ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್

ಮಂಗಳೂರು ನಗರದ ಕೆಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಂಡಿದೆ. ನಗರದ ಕೇಂದ್ರ ಸ್ಥಾನದಲ್ಲಿ ರುವ ವೆನ್ಲಾಕ್ ಆಸ್ಪತ್ರೆಯ ಬಳಿಯ ಕಾಮಗಾರಿಗಳು ಸ್ಥಗಿತಗೊಂಡಿರುವುದರಿಂದ ತುರ್ತು ಚಕಿತ್ಸೆಗೆ ಆಸ್ಪತ್ರೆಗೆ ಬರುವವರಿಗೂ ಸಮಸ್ಯೆ ಉಂಟಾಗುತ್ತಿದೆ. ಕೋಟ್ಯಂತರ ರೂ. ಮೊತ್ತವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ವ್ಯಯ ಮಾಡುತ್ತಿರುವ ಸಂದರ್ಭದಲ್ಲಿ ನಿಯಮ ಗಳನ್ನು ಉಲ್ಲಂಘನೆ ಮಾಡುತ್ತಿರುವುದು ಈ ರೀತಿ ಸಾರ್ವಜನಿಕ ಹಣದ ದುರುಪಯೋಗ ಆಗುವುದಕ್ಕೆ ಕಾರಣವಾಗಿದೆ ಎಂದು ಅಬ್ದುಲ್ ರವೂಫ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಲ್ಯಾನ್ಸ್ ಲೋಟ್ ಪಿಂಟೋ, ನವೀನ್ ಡಿಸೋಜ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಕೇಶವ ಮರೋಳಿ, ಝೀನತ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago