ಮಂಗಳೂರು, : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗವಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ವಿಪಕ್ಷದ ಮುಖ್ಯ ಸಚೇತಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಯ ರಥಬೀದಿಯ ಬಳಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆ ನಿರ್ಮಾಣವಾದ ಎರಡು ತಿಂಗಳ ಒಳಗೆ ಬಿರುಕು ಬಿಟ್ಟಿದೆ. ಕೆಲವು ಕಡೆ ಬಿರುಕು ಬಿಟ್ಟ ಕಾಂಕ್ರಿಟ್ ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭದಲ್ಲೂ ಹಲವು ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದರು.
ಒಂದೂವರೆ ಕೋಟಿ ರೂ.ನ ಕಾಮಗಾರಿ ವ್ಯರ್ಥ:
ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪುರಭವನದ ಬಳಿಯ ನೆಹರು ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ಸುಮಾರು ಒಂದೂವರೆ ಕೋಟಿ ರೂ. ವ್ಯಯ ಮಾಡಲಾಗಿದೆ. ಆದರೆ ಈ ಮೈದಾನವನ್ನು ಫುಟ್ಬಾಲ್ ಮೈದಾನವಾಗಿ ಉಳಿಸಿಕೊಳ್ಳಬೇಕು, ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಕೋಟ್ಯಂತರ ರೂ. ಸಾರ್ವಜನಿಕ ಹಣ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪೋಲಾದಂತಾಗಿದೆ. ನಗರದ ವಿವಿಧ ಕಡೆ ನಡೆಯುತ್ತಿರುವ ಕಾಮಗಾರಿಗಳೂ ಸಮರ್ಪಕವಾಗಿಲ್ಲ ಎಂದು ಅಬ್ದುಲ್ ರವೂಫ್ ದೂರಿದರು.
http://ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್
ಮಂಗಳೂರು ನಗರದ ಕೆಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಂಡಿದೆ. ನಗರದ ಕೇಂದ್ರ ಸ್ಥಾನದಲ್ಲಿ ರುವ ವೆನ್ಲಾಕ್ ಆಸ್ಪತ್ರೆಯ ಬಳಿಯ ಕಾಮಗಾರಿಗಳು ಸ್ಥಗಿತಗೊಂಡಿರುವುದರಿಂದ ತುರ್ತು ಚಕಿತ್ಸೆಗೆ ಆಸ್ಪತ್ರೆಗೆ ಬರುವವರಿಗೂ ಸಮಸ್ಯೆ ಉಂಟಾಗುತ್ತಿದೆ. ಕೋಟ್ಯಂತರ ರೂ. ಮೊತ್ತವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ವ್ಯಯ ಮಾಡುತ್ತಿರುವ ಸಂದರ್ಭದಲ್ಲಿ ನಿಯಮ ಗಳನ್ನು ಉಲ್ಲಂಘನೆ ಮಾಡುತ್ತಿರುವುದು ಈ ರೀತಿ ಸಾರ್ವಜನಿಕ ಹಣದ ದುರುಪಯೋಗ ಆಗುವುದಕ್ಕೆ ಕಾರಣವಾಗಿದೆ ಎಂದು ಅಬ್ದುಲ್ ರವೂಫ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಲ್ಯಾನ್ಸ್ ಲೋಟ್ ಪಿಂಟೋ, ನವೀನ್ ಡಿಸೋಜ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಕೇಶವ ಮರೋಳಿ, ಝೀನತ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…