Featured

ಮಂಗಳೂರು : ಸ್ವಯಂ ಪ್ರೇರಿತರಾಗಿ ಮಿಥುನ್ ರೈ ಪರ ಪ್ರಚಾರದಲ್ಲಿ ಯುವಕರ ತಂಡ- Vishwanews24

ಮಂಗಳೂರು, : ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.

ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಭಾವಚಿತ್ರ ಮತ್ತು ಚುನಾವಣಾ ಚಿಣ್ನೆ ಇರುವ ಟೀ ಶರ್ಟ್ ಮತ್ತು ಟೊಪ್ಪಿಗಳನ್ನು ಧರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಅವರಂತಹ ಯುವಕ, ವಿದ್ಯಾವಂತ ನಮ್ಮ ಜಿಲ್ಲೆಗೆ ಸಂಸದನಾಗಿ ಆಯ್ಕೆ ಆಗಬೇಕೆಂದು ತಾವೇ ಸ್ವಂತ ಹಣ ಖರ್ಚು ಮಾಡಿ ಮನೆ ಮನೆಗೆ ತೆರಳಿ ಮಿಥುನ್ ರೈ ಪ್ರ ಪ್ರಚಾರ ನಡೆಸುತ್ತಿದ್ದೇವೆ ಎಂದು ಪ್ರಚಾರ ತಂಡದ ಸುರೇಶ್ ತಿಳಿಸಿದ್ದಾರೆ.ಒಟ್ಟು ನಾಲ್ಕು ತಂಡಗಳನ್ನು ಮಾಡಿ ಮಿಥುನ್ ರೈ ಅವರ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಯುವಕರ ತಂಡ ಮನೆ ಮನೆ ಭೇಟಿ ನೀಡಿ, ಮಿಥುನ್ ರೈ ವಿದ್ಯಾವಂತ ಹಾಗೂ ಸುಸಂಸ್ಕೃತ ಕುಟುಂಬದ ಯುವಕ. ಮಂಗಳೂರಿನ ಸಮಗ್ರ ಅಭಿವೃದ್ದಿಗೆ ಮಿಥುನ್ ರೈ ಅತ್ಯುತ್ತಮ ಅಯ್ಕೆ. ಹಾಗಾಗಿ ಅವರನ್ನು ಪಕ್ಷಾತೀತವಾಗಿ ಮತದಾನ ಮಾಡಿ ಗೆಲ್ಲಿಸಬೇಕು ಎಂಬ ಬೇಡಿಕೆಯನ್ನು ಮತದಾರರ ಮುಂದಿಟ್ಟಿದ್ದಾರೆ.

ಈ ಹಿಂದೆ ನಡೆದಿದ್ದ ಲೋಕಸಭಾ ಚುಣಾವಣೆಯಲ್ಲಿ ಮೋದಿಯನ್ನು ಪ್ರಧಾನಿಯಾಗಿಸಬೇಕೆಂಬ ನಿಟ್ಟಿನಲ್ಲಿ ಕೆಲ ಯುವಕರು ನಮೋ ಬ್ರಿಗೇಡ್ ಎಂಬ ತಂಡ ಕಟ್ಟಿ ಪ್ರಚಾರ ನಡೆಸಿದ್ದರು. ಅದು ಭಾರಿ ಯಶಸ್ಸನ್ನು ತಂದು ಕೊಟ್ಟಿತ್ತು. ಈ ಬಾರಿ ಮತ್ತೊಂದು ಯುವಕರ ತಂಡ ಯುವ ನಾಯಕ ಮಿಥುನ್ ರೈ ಪರ ಪ್ರಚಾರಕ್ಕೆ ಧುಮುಕಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago