Featured

ಮಂಗಳೂರು : ಹಂತಕರು ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ : ಡಿಜಿಪಿ ಪ್ರವೀಣ್ ಸೂದ್ – Vishwanews24

ಮಂಗಳೂರು : ಹಂತಕರು ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ : ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು.

ಮಂಗಳೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರಷ್ಟೇ ನಾಗರಿಕರ ಜವಾಬ್ದಾರಿಯೂ ಇದೆ. ಆದ್ದರಿಂದ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರು ಪೊಲೀಸರೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಮಸೂದ್ ಹಂತಕರಲ್ಲಿ ಎಂಟು ಮಂದಿಯ ಬಂಧನವಾಗಿದೆ. ಪ್ರವೀಣ್ ಹಂತಕರಿಬ್ಬರ ಬಂಧನವಾಗಿದ್ದು, ತನಿಖೆ ಮುಂದಿವರಿದಿದೆ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇವೆ. ಫಾಝಿಲ್ ಹತ್ಯೆ ಪ್ರಕರಣದಲ್ಲೂ ಈಗಾಗಲೇ ಹಂತಕರು ಬಳಸಿರುವ ಕಾರು ಪತ್ತೆಯಾಗಿದ್ದು, ಕಾರು ಮಾಲಕನನ್ನೂ ವಶಪಡಿಸಿಕೊಳ್ಳಲಾಗಿದೆ. ಆತನ ಮೂಲಕ ಉಳಿದ ಆರೋಪಿಗಳನ್ನೂ ಬಂಧಿಸಲಾಗುತ್ತದೆ. ಸದ್ಯದಲ್ಲೇ ಮೂರೂ ಪ್ರಕರಣವನ್ನು ಬೇಧಿಸಲಾಗುತ್ತದೆ ಎಂದು ಪ್ರವೀಣ್ ಸೂದ್ ಹೇಳಿದರು.

ಐಜಿ, ದ.ಕ.ಜಿಲ್ಲಾ ಎಸ್ಪಿ, ಮಂಗಳೂರು ಪೊಲೀಸ್ ಕಮಿಷನರ್, ಡಿಸಿಯರೊಂದಿಗೆ ಚರ್ಚಿಸಿ ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸವಿವರವಾಗಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಗಡಿ ಪ್ರದೇಶದಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗುತ್ತದೆ. ಅದರೊಂದಿಗೆ ದ.ಕ.ಜಿಲ್ಲೆಯಲ್ಲಿ ಪೊಲೀಸ್ ಬಲ ಕಡಿಮೆಯಿದ್ದು, ಅದನ್ನು ಹೆಚ್ಚು ಮಾಡಲು ಸಿಎಂ ಜೊತೆಗೆ ಮಾತನಾಡಿದ್ದೇನೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ನಡೆದಿರುವ ಮೂರು ಪ್ರಕರಣಗಳಲ್ಲೂ ಹಂತಕರನ್ನು ಬಂಧಿಸಲಾಗುವುದು. ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ‌ ಎಂದರು

Vishwa News 24

Recent Posts

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

6 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

23 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

36 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago