Featured

ಮಂಗಳೂರು:  ಹಕ್ಕಿ ಜ್ವರ ಹಿನ್ನೆಲೆ ; ಜಿಲ್ಲೆಯಲ್ಲಿ ತೀವ್ರ ನಿಗಾ – vishwanews24

ಮಂಗಳೂರು:  ಹಕ್ಕಿ ಜ್ವರ ಹಿನ್ನೆಲೆ: ಜಿಲ್ಲೆಯಲ್ಲಿ ತೀವ್ರ ನಿಗಾ

ಪಶುಪಾಲನೆ, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸಮನ್ವಯ ಸಮಿತಿ ರಚನೆ

ಮಂಗಳೂರು: ರಾಜ್ಯದ ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲೂ ತೀವ್ರ ನಿಗಾ ವಹಿಸಲಾಗುತ್ತಿದೆ. ಪಶುಪಾಲನೆ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ.

ಸಮಿತಿ ಮಾ.1ರಂದು ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಿದೆ. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಿಗೂ ಹಕ್ಕಿ ಜ್ವರ ಮುನ್ನೆಚ್ಚರಿಕೆ ಕುರಿತು ಸುತ್ತೋಲೆ ಕಳುಹಿಸಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹಕ್ಕಿಜ್ವರ ಪ್ರತಿವರ್ಷ ವರದಿಯಾಗುತ್ತಿದೆ. ಮಾಂಸಗಳನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಅಗತ್ಯ. ಇದರಿಂದ ಮಾಂಸದಲ್ಲಿರುವ ಸೂಕ್ಷ್ಮಾಣು ಜೀವಿಗಳು ನಾಶವಾಗುತ್ತವೆ ಮತ್ತು ತಿನ್ನಲು ಯೋಗ್ಯವಾಗುತ್ತವೆ. ಸಮನ್ವಯ ಸಮಿತಿ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago