Featured

ಮಂಗಳೂರು : ಹಣಕ್ಕಾಗಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣ : ದಂಪತಿಗಳ ಸೆರೆ – Vishwanews24

ಮಂಗಳೂರು : ಹಣಕ್ಕಾಗಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣ : ದಂಪತಿಗಳ ಸೆರೆ – Vishwanews24

ಮಂಗಳೂರು: ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಬೇಕೆಂದು ಮನೆಯಲ್ಲಿ ಪೂಜೆ ಮಾಡಬೇಕೆಂದು ವ್ಯಕ್ತಿಯೊಬ್ಬರನ್ನು ಕರೆಯಿಸಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ಮೇರಿಹಿಲ್‌ ನಿವಾಸಿ ಭವ್ಯ (30) ಮತ್ತು ಕುಮಾರ್‌ @ ರಾಜು (35) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿಗಳು ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆಯನ್ನು ಮಾಡಿಕೊಡಬೇಕೆಂದು ಮನೆಗೆ ಕರೆಯಿಸಿಕೊಂಡು ಮನೆಯಲ್ಲಿರುವ ಸಮಯ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವೀಡಿಯೋವನ್ನು ತೆಗೆದು ನಂತರ ಈ ವೀಡಿಯೋ ಹಾಗೂ ಫೋಟೋವನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಲವು ಬಾರಿ ಪಿರ್ಯಾದಿದಾರರನ್ನು ಹೆದರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ ಹಣದ ಬೇಡಿಕೆ ಇಟ್ಟು ರೂ 15 ಲಕ್ಷ ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಂದ ಆರೋಪಿಗಳು ನೀಡಿದ ಬ್ಯಾಂಕ್ ಬೇರೆ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ..ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ದಂಪತಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : 

 

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರಿಯುವುದು. ಆರೋಪಿಗಳ ವಶದಿಂದ ರೂ 37,000/- ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000/-ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರಿಯುವುದು. ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್ ನು ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ಫಿರ್ಯಾದಿದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿರುವುದಾಗಿದೆ.

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿರುವುದಲ್ಲದೇ, ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿರುತ್ತಾರೆ. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ. ಆರೋಪಿಗಳ ಪೈಕಿ ಭವ್ಯಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ.

ಇದನ್ನೂ ಓದಿ : 

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೋಂಡಿರುತ್ತಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago