ಮಂಗಳೂರು, : ಕೇರಳ ಮೂಲದ ಯುವಕನಿಗೆ ಮಂಗಳೂರಿನ ಯುವತಿಯರಿಂದ ಹನಿಟ್ರ್ಯಾಪ್ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೇಷ್ಮಾ,ಮಹಮ್ಮದ್ ಇಕ್ಬಾಲ್, ಜೀನತ್ ಮತ್ತು ಅಬ್ದುಲ್ ಖಾದರ್ ನಾಜೀಪ್ ಎಂದು ಗುರುತಿಸಲಾಗಿದೆ.
ಜನವರಿ 16ರಂದು ಸಾಮಾಜಿಕ ಜಾಲತಾಣದ ಮೂಲಕ ಕೇರಳ ಮೂಲದವರನ್ನು ಇದೇ ರೀತಿ ಬ್ಲಾಕ್ ಮೇಲ್ ಮಾಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಅವರು ನೀಡಿದ ದೂರಿನ ಅನ್ವಯ ಸುರತ್ಕಲ್ ಪೋಲಿಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂದಿಸಿರುತ್ತಾರೆ. ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್, ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ ಆಯುಧ ಹಾಗೂ ವಾಹನವನ್ನು ವಶಪಡಿಸಿರುತ್ತಾರೆ.
ಆರೋಪಿ ಜೀನತ್ ಹಾಗೂ ಅವರ ಗಂಡ ಆರೋಪಿ ಇಕ್ವಾಲ್ ರವರು ಕಾನ-ಕಟ್ಟಾ ಪರಿಸರದ ಫ್ಲೋರೆಂಟೈನ್ ಅಪಾರ್ಟೈಂಟ್ಸ್ ನಲ್ಲಿ ವಾಸ್ತವ್ಯ ಇದ್ದು ಆರೋಪಿ ಶ್ರೀ ನಾಸಿಫ್ ಸೂರಿಂಜೆ ಮೂಲದವನಾಗಿದ್ದು ಪ್ರಸ್ತುತ ಚೊಕ್ಕಬೆಟ್ಟು ಪರಿಸರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡಿಕೊಂಡಿರುತ್ತಾರೆ. ಇವರು ಈ ಹಿಂದೆಯು ಕೂಡ ಮಂಗಳೂರು ಮತ್ತು ಆರೋಪಿಗಳ ಸ್ವಂತ ನಿವಾಸದಲ್ಲಿ ಕೇರಳ ಮೂಲದವರನ್ನು ಕರೆಸಿ ಇದೇ ರೀತಿಯ ಕೃತ್ಯ ಮಾಡಿಕೊಂಡು ಸುಮಾರು ಐದಾರು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿರುತ್ತದೆ ಮತ್ತು ಇವರ ಹಿಂದೆ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಪೋಲಿಸರು ಮಾಹಿತಿ ಕಲೆ ಹಾಕಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ಮೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್ ಐ.ಪಿ.ಎಸ್ (ಕಾ&ಸು) ಮತ್ತು ಉಪ ಪೊಲೀಸ್ ಆಯುಕ್ತರಾದ ಶ್ರೀ ವಿನಯ್ ಗಾಂವ್ಕರ್ (ಅಪರಾಧ & ಸಂಚಾರ) ರವರ ನಿರ್ದೇಶನದಂತೆ ಸಹಾಯಕ ಮೊಲೀಸ್ ಆಯುಕ್ತರು, ಉತ್ತರ ಉಪವಿಭಾಗ ಶ್ರೀ ಬೆಳ್ಯಪ್ಪ ಮತ್ತು ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಪ್ಪ ಕೆ, ಮತ್ತು ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …