ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ.
ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ನಡೆದ ಹರಕೆಯ ನೇಮೋತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ.
ಈ ಹಿಂದೆ ಶ್ರೀನಿಧಿ ಶೆಟ್ಟಿ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿಕೊಂಡಿದ್ದರು. ಅದರಂತೆ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗುತ್ತುವಿನಲ್ಲಿ ಜಾರಂದಾಯ ಮತ್ತು ಪರಿಹಾರ ದೈವಗಳ ನೇಮೋತ್ಸವ ನಡೆಯಿತು.
ಈ ನೇಮೋತ್ಸವದಲ್ಲಿ ನಟಿಯ ಕುಟುಂಬಸ್ಥರು ಸೇರಿದಂತೆ, ಸಂಬಂಧಿಕರು ಪಾಲ್ಗೊಂಡಿದ್ದಾರೆ. ಹೊತ್ತುಕೊಂಡ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.
ಈ ವೇಳೆ ದೈವ ಶ್ರೀನಿಧಿ ಶೆಟ್ಟಿಗೆ ʼನೀನು ಇನ್ನಷ್ಟು ಎತ್ತರಕ್ಕೆ ಏರುತ್ತೀಯʼ ಎಂದು ಅಭಯ ನೀಡಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ʼಕೆಜಿಎಫ್ 1,2ʼ ನಲ್ಲಿ ಮಿಂಚಿರುವ ಶ್ರೀನಿಧಿಗೆ ಆ ಬಳಿಕ ಹತ್ತಾರು ಆಫರ್ ಗಳು ಬಂದಿವೆ. ಸದ್ಯ ಅವರು ಕಿಚ್ಚ ಸುದೀಪ್ ಅವರ 47ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಆರಂಭಗೊಳ್ಳಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…