Featured

ಮಂಗಳೂರು : ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ – vishwanews24

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ

ಮಂಗಳೂರು : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

12 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago