ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು – Vishwnaews24
ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ನಗರದಲ್ಲಿ ಅಹಿತಕರ ಘಟನೆ ಸಂಭವಿಸಬಹುದಾದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಖಾಕಿ ಪಡೆ ಕೆಲ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಕೆಲದಿನಗಳ ಹಿಂದೆ ಎನ್ ಐಎ ತಂಡ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಉಡುಪಿ: ಪೊಲೀಸರ ದಾಳಿ : ಐವರು ಪಿಎಫ್‌ಐ ಮುಖಂಡರು ವಶಕ್ಕೆ .. Vishwanews24
ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107, 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
