Featured

ಮಂಗಳೂರು: ಹಳಿಗೆ ಬಿದ್ದ ಮರ – ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ – Vishwanews24

ಮಂಗಳೂರು: ಹಳಿಗೆ ಬಿದ್ದ ಮರ – ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು: ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ.

ಚಂದ್ರಾವತಿ (70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ.

ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು. ಇದನ್ನು ತಕ್ಷಣವೇ ಗಮನಿಸಿದ ಚಂದ್ರಾವತಿ ಅವರು ಮನೆಯಲ್ಲಿದ್ದ ಕೆಂಪು ವಸ್ತ್ರವನ್ನು ತಂದು ರೈಲು ಬರುವ ಸಮಯಕ್ಕೆ ಪ್ರದರ್ಶಿಸಿ ಲೋಕೋಪೈಲೆಟ್‌ ಅವರ ಗಮನ ಸೆಳೆದಿದ್ದಾರೆ.

ಇನ್ನು ಅಪಾಯ ಅರಿತ ಲೋಕೋಪೈಲೆಟ್‌ ರೈಲಿನ ವೇಗವನ್ನು ಕಡಿಮೆ ಮಾಡಿ ರೈಲನ್ನು ನಿಲ್ಲಿಸುವ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದ್ದು, ಬಳಿಕ ಸ್ಥಳೀಯರು ಹಾಗೂ ರೈಲ್ವೇ ಇಲಾಖೆಯ ಕೆಲವರು ಸೇರಿ ಮರ ತೆರವು ಮಾಡಿದ್ದಾರೆ.

 

ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿದ ಅವರು, ನಾನು ಊಟ ಮಾಡಿ ಮನೆಯ ಅಂಗಳದಲ್ಲಿದ್ದೆ. ನನ್ನ ಅಕ್ಕ ಮನೆಯಲ್ಲಿ ಮಲಗಿದ್ದರು. ಅದೇ ವೇಳೆ ಮನೆ ಎದುರಿನ ರೈಲು ಹಳಿಗೆ ಏನೋ ಬಿದ್ದ ಶಬ್ದ ಕೇಳಿತು. ಬಂದು ನೋಡಿದಾಗ ದೊಡ್ಡ ಮರ ಹಳಿಯಲ್ಲಿತ್ತು. ಅದೇ ವೇಳೆಗೆ ಮುಂಬಯಿ ರೈಲು ಸಂಚರಿಸುವ ಬಗ್ಗೆ ಗೊತ್ತಿತ್ತು. ಏನು ಮಾಡಬೇಕು ಎಂದು ತಕ್ಷಣಕ್ಕೆ ಗೊತ್ತಾಗಲಿಲ್ಲ. ಯಾರಿಗಾದರೂ ಕರೆ ಮಾಡಿ ತಿಳಿಸುವ ಎಂದು ಮನೆಗೆ ಬಂದೆ. ಆಗ ರೈಲಿನ ಹಾರ್ನ್ ಕೇಳಿಸಿತು. ಆಗ ದೇವರ ದಯೆಯಿಂದ ಅಲ್ಲೇ ಕೆಂಪು ಬಟ್ಟೆ ಕಂಡಿತು. ನನಗೆ ಹೃದಯದ ಆಪರೇಷನ್‌ ಆಗಿದ್ದರು ಅದನ್ನು ಲೆಕ್ಕಿಸದೆ ಕೆಂಪು ಬಟ್ಟೆ ಹಿಡಿದು ಹಳಿಯ ಬಳಿಗೆ ಓಡಿದೆ ಎಂದರು.

ಕೆಲವು ವರ್ಷಗಳ ಹಿಂದೆ ಪಚ್ಚನಾಡಿಯಲ್ಲಿ ರೈಲು ಹಳಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದ ಕೃಷಿಕ ಪ್ರಾಂಕ್ಲಿನ್‌ ಫೆರ್ನಾಂಡಿಸ್‌ ಅವರು ರಥಪುಷ್ಪದ ಹೂವನ್ನು ಕೈಯಲ್ಲಿ ಹಿಡಿದು ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago