ಮಂಗಳೂರು: ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿಯನ್ನ ಬರಿಗೈಯಲ್ಲಿ ಹಿಡಿದ ವ್ಯಕ್ತಿಗೆ ಹಾವು ಕಡಿದು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಮರವೂರು ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ 58 ವರ್ಷದ ರಾಮಚಂದ್ರ ಪೂಜಾರಿ ಮೃತ ದುರ್ದೈವಿ. ಮೃತ ರಾಮಚಂದ್ರ ಪೂಜಾರಿ ಮರವೂರಿನ ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದರು.
ಸೆ.4 ರ ಮಧ್ಯಾಹ್ನ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿಯೊಂದು ಕಾಣಿಸಿಕೊಂಡಿದೆ. ವಿಷಪೂರಿತ ಕನ್ನಡಿ ಹಾವಿನ ಮರಿಯನ್ನು ಹೆಬ್ಬಾವಿನ ಮರಿ ಎಂದು ಭಾವಿಸಿ ಬರಿಗೈಯಲ್ಲಿ ರಾಮಚಂದ್ರ ಪೂಜಾರಿ ಹಿಡಿದಿದ್ದರು.
ಈ ವೇಳೆ ಹಾವಿನ ಮರಿ ಕೈಗೆ ಕಚ್ಚಿದ್ದರೂ ಅದು ಹೆಬ್ಬಾವಿನ ಮರಿ ಎಂದು ನಿರ್ಲಕ್ಷಿಸಿದ್ದರು. ಬಳಿಕ ರಾಮಚಂದ್ರ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆ ದಾಖಲು ಮಾಡಲಾಗಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…