Featured

ಮಂಗಳೂರು : ಹಿಂದುತ್ವಕ್ಕೆ ಸಿಕ್ಕ ಗೆಲುವು – ಪಿಎಫ್ ಐ ನಿಷೇಧ  ಸ್ವಾಗತಿಸಿದ ಹಿಂದೂ ಮಹಾಸಭಾ – Vishwanews24

ಹಿಂದುತ್ವಕ್ಕೆ ಸಿಕ್ಕ ಗೆಲುವು : ಪಿಎಫ್ ಐ ನಿಷೇಧ ಸ್ವಾಗತಿಸಿದ ಹಿಂದೂ ಮಹಾಸಭಾ

ಆರೆಸ್ಸೆಸ್ ಯಾವತ್ತೂ ದೇಶ ವಿರೋಧಿ ಕೃತ್ಯ ಮಾಡಿಲ್ಲ..

ತಕ್ಷಣ ಮದರಾಸಗಳ ಮೇಲೆ ನಿರ್ಬಂಧ ಹೇರಬೇಕು..

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ SDPI  ಒವೈಸಿ  ವಕ್ಫ್ ಬೋರ್ಡನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು

ಮಂಗಳೂರು : ಆಡಳಿತದಲ್ಲಿರುವ ಸರಕಾರ ಪಿಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿರುವುದನ್ನು ಅಖಿಲ ಭಾರತ ಹಿಂದೂ ಮಹಾಸಭಾ ಸ್ವಾಗತಿಸುತ್ತದೆ. ಇದು ಹಿಂದುತ್ವಕ್ಕೆ ಸಿಕ್ಕ ಗೆಲುವು ಎಂದು ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ನೇತೃತ್ವದ ಸರಕಾರ ಪಿಎಫ್ ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿ , ಅದರ ರಾಜಕೀಯ ಮುಖವಾಣಿಯಾದ ಎಸ್ ಡಿಪಿಐಯನ್ನು, ಹಾಗೆ ಬಿಟ್ಟಿರುವುದು ಭಾರತೀಯ ಜನತಾ ಪಕ್ಷದ ಇಚ್ಚಾಶಕ್ತಿಯ ದೋಷ ಎಂದು ತಿಳಿಸಿದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಎಲ್ಲಾ ಬೆಳವಣಿಗೆಗಳಿಗೆ ಮದರಸಗಳಲ್ಲಿ ಕೊಡುವಂತಹ ರಾಷ್ಟ್ರ ವಿರೋಧ ಶಿಕ್ಷಣವೇ ಕಾರಣ. ಅದರಿಂದ ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಸರಕಾರ ತಕ್ಷಣ ಮದರಾಸಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಮುಖಾಂತರ ತನಿಖೆಯನ್ನು ಮಾಡಬೇಕು.

ಈವರೆಗೆ ಮದರಾಸಗಳಲ್ಲಿ ನಡೆದಂತಹ ಹಣಕಾಸಿನ ವಹಿವಾಟುಗಳನ್ನು ಇಡಿ ಮುಖಾಂತರ ತನಿಖೆ ನಡೆಸಿ, ತಕ್ಷಣ ಮದರಾಸಗಳ ಮೇಲೆ ನಿರ್ಬಂಧ ಹೇರಬೇಕು ಎಂದರು.

ಇನ್ನು ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅವರು ಮಾತಾಡಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಆರೆಸ್ಸೆಸ್ ನಿಷೇಧಕ್ಕೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಎಲ್ಲಿದ್ದವರು, ಏನು ಅರ್ಹತೆಯಿದೆ ಇವರಿಗೆ. ಆರೆಸ್ಸೆಸ್ ಕಾರ್ಯಕರ್ತರ ಮೆಟ್ಟಲಿಗೆ ಸಮ ನೀವು.ದೇಶಭಕ್ತ ಸಂಘಟನೆಯ ಮಾತನಾಡುವಾಗ ಎಚ್ಚರ ಇರಲಿ. ಆರೆಸ್ಸೆಸ್ ಬಗ್ಗೆ ಏನೇ ವ್ಯತಿರಿಕ್ತ ಹೇಳಿಕೆ ನೀಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು ಆರೆಸ್ಸೆಸ್ ಯಾವತ್ತೂ ದೇಶ ವಿರೋಧಿ ಕೃತ್ಯ ಮಾಡಿಲ್ಲ.

ಇದನ್ನೂ ಓದಿ: ಚಿಕ್ಕಮಗಳೂರು: ಕಳಸದಲ್ಲಿಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿದ ಯುವಕ : ಮೃತದೇಹ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – Vishwanews24 

ಆದ್ರೆ ಎಸ್‌ಡಿಪಿಐ, ಒವೈಸಿಯ ಪಕ್ಷಗಳು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದು ಅವುಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಕ್ಫ್ ಬೋರ್ಡ್ ಯಾರ ಅಧೀನದಲ್ಲಿದೆ ಎಂದು ಪ್ರಶ್ನಿಸಿದ ಧರ್ಮೇಂದ್ರ ವಕ್ಫ್ ಬೋರ್ಡ್ ಮೂಲಕ ಉಗ್ರಗಾಮಿಗೆ ದೇಣಿಗೆ ಹೋಗುತ್ತದೆ ಎಂದರೇನು ? ತಾಕತ್ತಿದ್ದರೆ ವಕ್ಫ್ ಬೋರ್ಡನ್ನು ನಿಷೇಧಿಸಬೇಕು ಎಂದು ಸರ್ಕಾಕ್ಕೆ ಸವಾಲ್ ಹಾಕಿದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

10 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

10 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

10 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

11 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

11 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

11 hours ago