Featured

ಮಂಗಳೂರು: ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ: ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು – Vishwanews24

ಮಂಗಳೂರು: ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ: ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು

ಮಂಗಳೂರು: ಬಪ್ಪನಾಡುವಿನಲ್ಲಿ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂಬುದಾಗಿ ಅಳವಡಿಸಲಾದ ಫ್ಲೆಕ್ಸ್ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

 

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರೆ ಸಂಬಂಧ ಅಳವಡಿಸಲಾದ ಫ್ಲೆಕ್ಸ್ ನಲ್ಲಿ ಹಿಂದೂಯೇತರರಿಗೆ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಬರೆದಿರುವುದು ಸಾಮಾಜಿಕ ತಾಣಗಳನ್ನು ಹರಿದಾಡುತ್ತಿದೆ. ಅಲ್ಲದೆ ಸಂವಿಧಾನ ಮತ್ತು ಕಾನೂನು ಗೌರವಿಸದಿರುವವರಿಗೆ, ಗೋವುಗಳನ್ನು ಅಮಾನುಷವಾಗಿ ಕೊಲ್ಲುವವರಿಗೆ ಕೂಡಾ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬರೆಯಲಾಗಿದೆ. ಈ ಎರಡು ವಿಚಾರಗಳ ಬಗ್ಗೆ ದೇವಳದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಕಾರ್ಪೋರೇಟರ್ ಗಮನಕ್ಕೆ ತರಲಾಗಿದೆ. ಈ ವಿಚಾರವಾಗಿ ಅವರು ಏನು ಕ್ರಮಕ್ಕೆ ಮುಂದಾಗುತ್ತಾರೆ ಎಂಬುದನ್ನು ನೋಡಿ ಬಳಿಕ ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬುದಾಗಿ ನಿಯಮ ಇದೆ ಎಂದು ಆಡಳಿತ ಮಂಡಳಿಯವರು ಹೇಳಿದ್ದಾರೆ. ಆದರೆ ಈ ಬಗ್ಗೆ ಲಿಖಿತ ದಾಖಲೆಗಳು ಸಿಕ್ಕಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಪರಿಶೀಲನೆ ಮಾಡಲಿದ್ದಾರೆ. ಒಂದು ವೇಳೆ ಕಾನೂನು ಮೀರಿ ಉಲ್ಲಂಘನೆ ಕಂಡು ಬಂದಲ್ಲಿ ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago