Featured

ಮಂಗಳೂರು: : ಹಿಂದೂ ರಾಷ್ಟ್ರ ಜಾಗೃತಿ ಸಭೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು : ಕಮೀಷನರ್‌ಗೆ SDPI ಮನವಿ – Vishwanews24

ಮಂಗಳೂರು: : ಹಿಂದೂ ರಾಷ್ಟ್ರ ಜಾಗೃತಿ ಸಭೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು : ಕಮೀಷನರ್‌ಗೆ SDPI ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಲಾಗಿದ್ದು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವೀಡಿಯೊಗಳು ಹರಿದಾಡುತ್ತಿದೆ, ಇದೊಂದು ಕಾನೂನು ಬಾಹಿರ ಮತ್ತು ದೇಶವಿರೋಧಿ ಸಭೆಯಾಗಿರುತ್ತದೆ.

ಈ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಎಸ್‌ಡಿಪಿಐ ನಿಯೋಗ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಮನವಿಯಲ್ಲಿ, ಭಾರತವು ಪರಿಪೂರ್ಣ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಸಂವಿಧಾನ ಪ್ರಬಲವಾಗಿ ಪ್ರತಿಪಾದಿಸಿರುತ್ತದೆ. ಈ ದೇಶವು ಯಾವುದೇ ದರ್ಮದ ಆಧಾರದಲ್ಲಿ ಗುರುತಿಸುವ ದೇಶವೆಂದು ಉಲ್ಲೇಖಿಸುವುದು ಕಾನೂನು ಬಾಹಿರ ಮತ್ತು ದೇಶದ್ರೋಹದ ಕ್ರತ್ಯವಾಗಿದೆ.

ಆದ್ದರಿಂದ ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದೇಶದ್ರೋಹಿ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈಗಾಗಲೇ ಜಿಲ್ಲಾದ್ಯಂತ ಪೋಸ್ಟರ್ ಅಂಟಿಸಿ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಹಿಂದೂ ಜನಜಾಗೃತಿ ಸಮಿತಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಆ ಸಂಘಟನೆಯನ್ನು ನಿಷೇಧ ಮಾಡಿ ಅದರ ಮುಖಂಡರನ್ನು ಬಂಧಿಸಬೇಕು ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದೆ.

ನಿಯೋಗದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ವ,ಉಳ್ಳಾಲ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ಉಪಸ್ಥಿತರಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago