ಮಂಗಳೂರು: ಹಿಂದೂ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.
ಇಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ. ಒಂದು ವೇಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ಗೆ ಗಡಿಪಾರು ಮಾಡುವುದಾಗಿ ನೋಟಿಸ್ನಲ್ಲಿ ಈ ಬಗ್ಗೆ ಸಹಾಯಕ ಆಯುಕ್ತರ ಕಚೇರಿ ಉಲ್ಲೇಖ ಮಾಡಿದ್ದಾರೆ. ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ.
ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…