ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ.
ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್ಫರ್ ಸರ್ಟಿಫಿಕೇಟ್ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ.
ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು ನಿರಾಕರಿಸಿದ್ದರು.
ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಇದೀಗ ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಪ್ರತಿಕ್ರಿಯೆ ನೀಡಿದ್ದು, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ. ಇದೀಗ ಕಾಲೇಜಿನಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…