Featured

ಮಂಗಳೂರು ಹಿಜಾಬ್ ವಿವಾದ : ಕಾಲೇಜಿನಿಂದ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು – Vishwanews24

ಮಂಗಳೂರು ಹಿಜಾಬ್ ವಿವಾದ : ಕಾಲೇಜಿನಿಂದ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು..

ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ..

ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿ..

ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಸ್ಪಷ್ಟನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ.

ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್​ಫರ್ ಸರ್ಟಿಫಿಕೇಟ್ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ.

ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು‌ ನಿರಾಕರಿಸಿದ್ದರು.

ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಇದೀಗ ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಪ್ರತಿಕ್ರಿಯೆ ನೀಡಿದ್ದು, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ. ಇದೀಗ ಕಾಲೇಜಿನಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

15 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

15 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

16 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

16 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

16 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

18 hours ago