ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಉಂಟಾದ ಹಿಜಾಬ್ ಧರಿಸುವ ಕುರಿತ ವಿವಾದಕ್ಕೆ ಸಂಬಂಧಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ತೆಗೆದುಕೊಂಡಿರುವ ನಿರ್ಧಾರವನ್ನು ಅನುಸರಿಸುವಂತೆ ದ.ಕ.ಜಿಲ್ಲಾಧಿಕರಿ ಡಾ.ರಾಜೇಂದ್ರ ಕೆ.ವಿ ಅವರು ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದಾರೆ.
ಹಿಜಾಬ್ ಧರಿಸಲು ಅವಕಾಶ ಇಲ್ಲದ ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧಾರವನ್ನು ಒಪ್ಪದ ಕೆಲವು ಮುಸ್ಲಿಂ ವಿದ್ಯಾರ್ಥಿನಿಯ ಸೋಮವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಆದರೆ ಅವರಿಗೆ ಪ್ರವೇಶ ನೀಡಿರಲಿಲ್ಲ . ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಜತೆ ಮಾತುಕತೆ ನಡೆಸಿದರು.
ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ರಾಜೇಂದ್ರ, ‘ವಿಶ್ವವಿದ್ಯಾಲಯದ ಸಿಂಡಿಕೇಟ್ ತೆಗೆದುಕೊಳ್ಳುವ ನಿರ್ಧಾರದಲ್ಲಿ ಜಿಲ್ಲಾಡಳಿತ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ವಿಶ್ವವಿದ್ಯಾನಿಲಯಗಳು ತೆಗೆದುಕೊಳ್ಳುವ ನಿರ್ಧಾರಗಳಿಗೆ ಕಾಲೇಜುಗಳು ಬದ್ಧವಾಗಿರಬೇಕು. ಕಾನೂನು ಪಾಲನೆ ಮಾಡದೆ ಶಾಂತಿ ಕದಡದಂತೆ ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದೇನೆ. ನಾನು ಅವರ ಅಹವಾಲು ಆಲಿಸಿದ್ದೇನೆ ಮತ್ತು ಅವರಿಗೆ ಕೆಲವು ವಿಷಯಗಳನ್ನು ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…