ಮಂಗಳೂರು: ಹಿರಿಯ ನ್ಯಾಯವಾದಿ, ಸಾಮಾಜಿಕ ಧುರೀಣ ಹಾಗೂ ಶಿಕ್ಷಣ ತಜ್ಞ ಕೆ.ಎಸ್.ಕಲ್ಲೂರಾಯ(75) ಮಂಗಳವಾರ ನಿಧನರಾಗಿದ್ದಾರೆ.
ಕೊಡಿಯಾಲ್ ಬೈಲ್‍ನ ಶಾರದಾ ವಿದ್ಯಾಲಯ ಸೇರಿದಂತೆ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಟ್ರಸ್ಟಿ ಮತ್ತು ಉಪಾಧ್ಯಕ್ಷರಾಗಿರುವ ಕಲ್ಲೂರಾಯ ಸಾಮಾಜಿಕ ಧುರೀಣರಾಗಿ ಹೆಸರುವಾಸಿಯಾಗಿದ್ದರು.
ವಕೀಲರ ಸಂಘದ ಹಿರಿಯ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದರು. ಶಾರದಾ ವಿದ್ಯಾಲಯದಲ್ಲಿ ಉಪಾಧ್ಯಕ್ಷರಾಗಿದ್ದರು. ಎಸ್‍ಕೆಡಿಬಿ ಟ್ರಸ್ಟಿಯಾಗಿದ್ದರು. ಲಕ್ಷ್ಮೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿಯೂ ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕಲ್ಲೂರಾಯರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್, ವೇದವ್ಯಾಸ್ ಕಾಮತ್, ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರೊ. ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವರು ಶೋಕ ವ್ಯಕ್ತಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…