Featured

ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ -Vishwanews24

ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ

ಮೂಡುಬಿದಿರೆ : ಅನಾರೋಗ್ಯದ ಕಾರಣದಿಂದಾಗಿ ಹಿರಿಯ ಭಾಗವತ ನಾರಾಯಣ ಬಲಿಪ ಅವರು ನಿಧನರಾಗಿದ್ದಾರೆ. ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಬಲಿಪ ಅವರು, ತೆಂಕು ತಿಟ್ಟಿನ ಮೇರು ಭಾಗವತರಾಗಿದ್ದರು. ಕಳೆದ ೧೫ ದಿನದಿಂದ ಅಸ್ವಸ್ಥರಾಗಿದ್ದರು. ಇಂದು ಸಂಜೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಸುದೀರ್ಘ ೬೦ ವರ್ಷಗಳ ಕಾಲ ಸೇವೆ ನೀಡಿದ್ದರು. ಬಲಿಪರು ಹಾಡುಗಳು ಯಕ್ಷಗಾನ ರಂಗದಲ್ಲಿ ಜನಜನಿತವಾಗಿವೆ. ಕಟೀಲು ಮೇಳದಲ್ಲಿ ಹಲವಾರು ವರುಷಗಳ ಕಾಲ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಮಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಲಿಪ ಅವರು ಪಡೆದುಕೊಂಡಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ ೧೩, ೧೯೩೮ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶಗೈದು, ಸುದೀರ್ಘ ಸೇವೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

16 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

19 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago