ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.
ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು.
ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಇವರದು.
ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಕೆ.ಟಿ.ಗಟ್ಟಿ ಅವರು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದ ಇವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅಪಾರ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…