ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ,ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ,ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು ಎಂಬುದರ ಕುರಿತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. ರೂ. 230 ಕೋಟಿ ಅನುದಾನದಲ್ಲಿ ಕಡಲ್ಕೊರೆತ ಕಾಮಗಾರಿಯು ಪ್ರಗತಿಯಲ್ಲಿದೆ, ಒಟ್ಟಾರೆಯಾಗಿ ಮೀನುಗಾರರು ಸಂಕಷ್ಟದಿಂದ ಪಾರಾಗಬೇಕೆಂಬುದು ಸರಕಾರದ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.
ದ.ಕ.ಜಿ.ಪಂ.ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್, ಹೇಮಂತ್ ಶೆಟ್ಟಿ, ಚಂದ್ರಶೇಖರ್ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, ತಾಲೂಕು ಪಂಚಾಯತ್ ಸದಸ್ಯರಾದ ರವಿಶಂಕರ್ ಸೋಮೇಶ್ವರ, ನವೀನ್ ಪಾದಲ್ಪಾಡಿ, ಸೋಮೇಶ್ವರ ಪುರಸಭಾ ಆಯುಕ್ತರಾದ ವಾಣಿ ಆಳ್ವ, ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…