ಮಂಗಳೂರು: ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್ ಬುಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವಿವೊಂದು ಪರ್ಶಿಯನ್ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಉರಗತಜ್ಞರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ತಜ್ಞರು ಹೆಬ್ಬಾವಿನ ದೇಹವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಹೆಬ್ಬಾವಿನ ದೇಹದಲ್ಲಿ 11 ಬುಲೆಟ್ ಪತ್ತೆಯಾಗಿದೆ.
ಹೆಬ್ಬಾವು ಪರ್ಶಿಯನ್ ಬೆಕ್ಕನ್ನು ತಿನ್ನುವಾಗ ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿ ನುಂಗಲಾರದೆ ಕಷ್ಟಪಡುತ್ತಿತ್ತು. ಉರಗತಜ್ಞ ಭುವನ್ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೆಬ್ಬಾವಿನಿಂದ ಬಲೆ ತೆರವುಗೊಳಿಸಿ ರಕ್ಷಿಸಲಾಯಿತು. ಪಶುವೈದ್ಯ ಡಾ| ಯಶಸ್ವಿ ಅವರು ಹೆಬ್ಬಾವಿಗೆ ಚಿಕಿತ್ಸೆ ನೀಡಿದ್ದಾರೆ.
ಆದರೆ ಹೆಚ್ಚಿನ ಚಿಕಿತ್ಸೆಗೆಂದು ಹೆಬ್ಬಾವನ್ನು ಎಕ್ಸ್‌ರೇ ಮಾಡಿಸಿದಾಗ ದೇಹದಲ್ಲಿ 11 ಏರ್ ಬುಲೆಟ್ ಪತ್ತೆಯಾಗಿದೆ. ಸುಮಾರು ವರ್ಷಗಳ ಹಿಂದೆಯೇ ಈ ಹೆಬ್ಟಾವಿಗೆ ಏರ್‌ಗನ್‌ನಿಂದ ಶೂಟ್ ಮಾಡಿರಬಹುದು. ಇದೇ ಕಾರಣಕ್ಕೆ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲೆಟ್‌ಗಳನ್ನು ಸದ್ಯ ಹೊರತೆಗೆಯಲಾಗಿದ್ದು, ಸದ್ಯ ಹೆಬ್ಬಾವು ಚೇತರಿಸಿಕೊಳ್ಳುತ್ತಿದೆ ಎಂದು ಉರಗ ತಜ್ಞ ಭುವನ್ ದೇವಾಡಿಗ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…