ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯದ 40ನೆ ಘಟಿಕೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ, ಸಮಾಜಸೇವಕಿ ಹೇಮಾವತಿ ವಿ ಹೆಗ್ಗಡೆ, ಕ.ಸಾ.ಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಲಾವಿದ ದೇವದಾಸ್ ಕಾಪಿಕಾಡ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಮತ್ತು ಡಾ.ಶಿವಾನಂದ ನಾಯ್ಕ್ ಅವರಿಗೆ ವಿಜ್ಞಾನ (ಸಂಶೋಧನೆಗೆ ) ಡಾಕ್ಟರೇಟ್ ಪುರಸ್ಕಾರ ನೀಡಲಾಗುತ್ತಿದೆ ಎಂದು ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಎ.23ರಂದು ನಡೆಯುವ ಘಟಿಕೋತ್ಸವದಲ್ಲಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಸಹ ಕುಲಾಧಿಪತಿ ಡಾ. ಅಶ್ವತ್ಥನಾರಾಯಣ ಭಾಗವಹಿಸಲಿದ್ದಾರೆ.
153 ಮಂದಿಗೆ ಪಿಎಚ್ ಡಿ ಪದವಿ, 52ಮಂದಿಗೆ ಚಿನ್ನದ ಪದಕ, 192 ವಿದ್ಯಾರ್ಥಿಗಳಿಗೆ ರ‍್ಯಾಂಕ್ ನೀಡಲಾಗುತ್ತದೆ ಎಂದು ಕುಲಪತಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪರಿಕ್ಷಾಂಗ ಕುಲಸಚಿವ ಎಲ್.ಧರ್ಮ, ವಿ.ವಿ.ಕಾಲೇಜ್ ಪ್ರಾಂಶುಪಾಲರಾದ ಡಾ.ಅನಸೂಯ ರೈ ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…