ಮಂಗಳೂರು: ನಗರದ ಎಸ್.ಡಿ.ಎಂ ಕಾನೂನು ಕಾಲೇಜು ಮುಂಭಾಗದಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕೊಂದು ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಉರಿದು ಬೂದಿಯಾದ ಘಟನೆ ನಡೆದಿದೆ.
ವಿದ್ಯಾರ್ಥಿ ಕಾಲೇಜು ಮುಂಭಾಗ ಬೈಕ್ ನಿಲ್ಲಿಸಿ ಕಾಲೇಜಿಗೆ ಹೋಗಿದ್ದಾನೆ. ಆದರೆ ವಿದ್ಯಾರ್ಥಿ ಹೋದ ಕೆಲ ಹೊತ್ತಿನಲ್ಲೇ ಧಗ ಧಗನೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಮೊದಲು ಬೈಕಿನ ಪೆಟ್ರೋಲ್ ಟ್ಯಾಂಕಿಗೆ ಬೆಂಕಿ ಹತ್ತಿ ಇಡೀ ಬೈಕ್ ಸುಟ್ಟು ಹೋಗಿದೆ. ಬಳಿಕ ಬೈಕಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಓಡಿ ಬಂದಿದ್ದಾರೆ. ಬಳಿಕ ಬಕೆಟ್ ಮೂಲಕ ನೀರು ತಂದು ವಿದ್ಯಾರ್ಥಿ ಬೆಂಕಿಯನ್ನು ನಂದಿಸಿದ್ದಾನೆ. ಆದರೆ ಬೆಂಕಿ ಹೊತ್ತಿದ ರಭಸಕ್ಕೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಬೈಕಿಗೆ ಬೆಂಕಿ ಹೇಗೆ ಹೊತ್ತಿಕೊಂಡಿದ್ದು ಎಂದು ಪರಿಶೀಲಿಸಿದಾಗ ಬೈಕಿನ ಸೈಲೆನ್ಸರ್ ಬಳಿ ಬಟ್ಟೆಯ ತುಂಡು ಇದ್ದಿದು ಪತ್ತೆಯಾಗಿದೆ. ಸೈಲೆನ್ಸರ್ ಬಿಸಿಯಾದಾಗ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಉರಿದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…