ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ದ.ಕ. ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದ.ಕ. ಜಿಲ್ಲಾಧಿಕಾರಿ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಹೊರರಾಜ್ಯದಿಂದ ಆಗಮಿಸುವವರಿಗೆ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೊರರಾಜ್ಯದಿಂದ ಬರುವವರು ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ ಎಂಬುವುದಾಗಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಜಿಲ್ಲೆಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅನಾವಶ್ಯಕ ರಸ್ತೆಗಳನ್ನು ಮುಚ್ಚಬೇಕು. ತಾಲೂಕುವಾರು ಚೆಕ್ ಪೋಸ್ಟ್ ಗಳೊಂದಿಗೆ ಹೆಚ್ಚುವರಿ ಚೆಕ್‌ಪೋಸ್ಟ್‌ಗಳನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊರ ರಾಜ್ಯಗಳಿಂದ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದಂತಹ ಸಂದರ್ಭ ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್ ಪರೀಕ್ಷಾ ವರದಿಯನ್ನು ತರಬೇಕು ಹಾಗೂ ಅವರ ಜತೆ ಜಿಲ್ಲೆಗೆ ಆಗಮಿಸುವ ಪೋಷಕರು ನಗಟಿವ್ ವರದಿ ತರಬೇಕು ಎಂದು ಹೇಳಿದರು.