ಮಂಗಳೂರು: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ದ.ಕ. ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದ.ಕ. ಜಿಲ್ಲಾಧಿಕಾರಿ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಹೊರರಾಜ್ಯದಿಂದ ಆಗಮಿಸುವವರಿಗೆ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೊರರಾಜ್ಯದಿಂದ ಬರುವವರು ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ ಎಂಬುವುದಾಗಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಜಿಲ್ಲೆಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅನಾವಶ್ಯಕ ರಸ್ತೆಗಳನ್ನು ಮುಚ್ಚಬೇಕು. ತಾಲೂಕುವಾರು ಚೆಕ್ ಪೋಸ್ಟ್ ಗಳೊಂದಿಗೆ ಹೆಚ್ಚುವರಿ ಚೆಕ್‌ಪೋಸ್ಟ್‌ಗಳನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊರ ರಾಜ್ಯಗಳಿಂದ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದಂತಹ ಸಂದರ್ಭ ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್ ಪರೀಕ್ಷಾ ವರದಿಯನ್ನು ತರಬೇಕು ಹಾಗೂ ಅವರ ಜತೆ ಜಿಲ್ಲೆಗೆ ಆಗಮಿಸುವ ಪೋಷಕರು ನಗಟಿವ್ ವರದಿ ತರಬೇಕು ಎಂದು ಹೇಳಿದರು.
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…