Featured

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣ ಸುಲಿಗೆಗೆ ಇಳಿದಿದ್ದ ನಾಲ್ವರು ಪೊಲೀಸ್ ವಶಕ್ಕೆ -Vishwanews24

ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿಚಾರಣೆ ಹಲವಾರು ಮಾಹಿತಿಗಳನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರನ್ನು ಮಂಗಳೂರು ನಗರದ‌ ಕುಲಶೇಖರದ ದೀಕ್ಷಿತ್ ಪೂಜಾರಿ, ಸೋಮೇಶ್ವರದ ಚಂದ್ರಹಾಸ ಪೂಜಾರಿ , ಕೋಟೆಕಾರ್‌ ನ ಹೇಮಚಂದ್ರ, ಸುರತ್ಕಲ್ ಚೇಳಾರಿನ‌ ಸಂತೋಷ್ ಪೂಜಾರಿ ಎಂದು ಗುರುತಿಸಲಾಗಿದೆಯ. ಇವರ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ‌ ರೌಡಿಶೀಟ್ ತೆರೆಯಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ದರೋಡೆ, ಕಳ್ಳತನ, ಸುಲಿಗೆ ಮೂಲಕ ಮೊದಲು ಹಣ ಗಳಿಸುವುದು ಮತ್ತು ಬಳಿಕ ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳ ಕೊಲೆ ಮಾಡುವುದು ಹಾಗೂ‌ ಮಂಗಳೂರಿನ ಕ್ರಿಮಿನಲ್ ಚಟುವಟಿಕೆಯ ಮೇಲೆ‌ ನಿಯಂತ್ರಣ ಸಾಧಿಸುವುದು ಬಂಧಿತರ ಆರೋಪಿಗಳ ಯೋಜನೆಯಾಗಿತ್ತು.

ಇವರು ಮರಳು, ಗಾಂಜಾ ದಂಧೆಯಲ್ಲೂ ಭಾಗಿಯಾಗಿದ್ದರು.‌ ಭೂಗತ ಪಾತಕಿ‌ ರವಿ ಪೂಜಾರಿ ಹಾಗೂ ಕ್ರಿಮಿನಲ್‌ಗಳ ಜೊತೆ‌ ನಿಕಟ ಸಂಪರ್ಕದಲ್ಲಿದ್ದ ಇವರು ತಮ್ಮದೇ ಆದ ರೌಡಿ ಗ್ಯಾಂಗ್ ಕಟ್ಟಲು ಸಿದ್ಧತೆ ನಡೆಸಿದ್ದರು.‌ಇವರು ಸುಲಿಗೆಗೈದ ಎರಡು ದ್ವಿಚಕ್ರ ವಾಹನ, ನಗದು, ಮೊಬೈಲ್ ಫೋನ್,‌ ಮಾರಕಾಸ್ತ್ರವನ್ನು ವಶಕ್ಕೆ ‌ಪಡೆಯಲಾಗಿದೆ ಎಂದರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago