ಮಂಗಳೂರು : ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿಚಾರಣೆ ಹಲವಾರು ಮಾಹಿತಿಗಳನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತರನ್ನು ಮಂಗಳೂರು ನಗರದ ಕುಲಶೇಖರದ ದೀಕ್ಷಿತ್ ಪೂಜಾರಿ, ಸೋಮೇಶ್ವರದ ಚಂದ್ರಹಾಸ ಪೂಜಾರಿ , ಕೋಟೆಕಾರ್ ನ ಹೇಮಚಂದ್ರ, ಸುರತ್ಕಲ್ ಚೇಳಾರಿನ ಸಂತೋಷ್ ಪೂಜಾರಿ ಎಂದು ಗುರುತಿಸಲಾಗಿದೆಯ. ಇವರ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ ರೌಡಿಶೀಟ್ ತೆರೆಯಲಾಗಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ದರೋಡೆ, ಕಳ್ಳತನ, ಸುಲಿಗೆ ಮೂಲಕ ಮೊದಲು ಹಣ ಗಳಿಸುವುದು ಮತ್ತು ಬಳಿಕ ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳ ಕೊಲೆ ಮಾಡುವುದು ಹಾಗೂ ಮಂಗಳೂರಿನ ಕ್ರಿಮಿನಲ್ ಚಟುವಟಿಕೆಯ ಮೇಲೆ ನಿಯಂತ್ರಣ ಸಾಧಿಸುವುದು ಬಂಧಿತರ ಆರೋಪಿಗಳ ಯೋಜನೆಯಾಗಿತ್ತು.
ಇವರು ಮರಳು, ಗಾಂಜಾ ದಂಧೆಯಲ್ಲೂ ಭಾಗಿಯಾಗಿದ್ದರು. ಭೂಗತ ಪಾತಕಿ ರವಿ ಪೂಜಾರಿ ಹಾಗೂ ಕ್ರಿಮಿನಲ್‌ಗಳ ಜೊತೆ ನಿಕಟ ಸಂಪರ್ಕದಲ್ಲಿದ್ದ ಇವರು ತಮ್ಮದೇ ಆದ ರೌಡಿ ಗ್ಯಾಂಗ್ ಕಟ್ಟಲು ಸಿದ್ಧತೆ ನಡೆಸಿದ್ದರು.ಇವರು ಸುಲಿಗೆಗೈದ ಎರಡು ದ್ವಿಚಕ್ರ ವಾಹನ, ನಗದು, ಮೊಬೈಲ್ ಫೋನ್, ಮಾರಕಾಸ್ತ್ರವನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…