Featured

ಮಂಗಳೂರು: ಹೊಸ ವರ್ಷದ ಶುಭಾಶಯ ನೆಪದಲ್ಲಿ ಎಪಿಕೆ ಫೈಲ್‌ ಕಳುಹಿಸಿ ವಂಚಿಸುವ ಸಾಧ್ಯತೆ ; ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರ ಸೂಚನೆ – vishwanews24

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಸಾರ್ವಜನಿಕರಿಗೆ ಪೊಲೀಸರ ಸೂಚನೆ

ಮಂಗಳೂರು: ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್‌ ವಂಚಕರು ವಂಚಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ.

2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗ‌ಳಲ್ಲಿ(APK) ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಮೊಬೈಲ್‌ ಹ್ಯಾಕ್‌ ಮಾಡಿದ ಅನಂತರ ಆ ಮೊಬೈಲ್‌ನಿಂದ ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್‌ ಮತ್ತು ಎಪಿಕೆ ಫೈಲ್‌ಗ‌ಳನ್ನು ದೊಡ್ಡ ಮಟ್ಟದಲ್ಲಿ ಶೇರ್‌ ಮಾಡುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಎಪಿಕೆ ಫೈಲ್‌ಗ‌ಳನ್ನು ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ಕೂಡಲೇ ಡಿಲೀಟ್‌ ಮಾಡಬೇಕು. ಒಂದು ವೇಳೆ ಅಂತಹ ಎಪಿಕೆ ಫೈಲ್‌ಗ‌ಳನ್ನು ಯಾವುದೇ ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಿಗೆ ಪರಿಚಿತ ವಾಟ್ಸ್‌ ಆ್ಯಪ್‌ ಸಂಖ್ಯೆಯಿಂದಲೇ ಪೋಸ್ಟ್‌ ಮಾಡಿದ್ದರೆ ಅಂತಹ ಗ್ರೂಪ್‌ನ ಅಡ್ಮಿನ್‌ಗಳು ಫೈಲ್‌ಗ‌ಳನ್ನು ಡಿಲೀಟ್‌ ಮಾಡಬೇಕು.

ಯಾವುದೇ ಸೈಬರ್‌ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಗೆ ಕರೆ ಮಾಡಬೇಕು ಅಥವಾ www.cybercrime.gov.in ನಲ್ಲಿ ದೂರು ಸಲ್ಲಿಸುವಂತೆ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago