Featured

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ – vishwanews24

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ

ಮಂಗಳೂರು  : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮ ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇತರ ಪ್ರಮುಖ ಮಾರ್ಗಸೂಚಿಗಳು :

# ಪೂರ್ವಾನುಮತಿ ಇಲ್ಲದೆ ಹೊಸ ವರ್ಷಾಚರಣೆ ನಡೆಸುವ ಮೂಲಕ ನಿಯಮ ಉಲ್ಲಂಘಿಸುವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು.

# ಧ್ವನಿವರ್ದಕ ಮಟ್ಟವು ಶಬ್ಧ ಮಾಲಿನ್ಯ ನಿಯಮ 2000 ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಅನುಸರಿಸಬೇಕು. ಡಿಜೆ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧವಿದ್ದು, ಸಂಭ್ರಮಾಚರಣೆ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೆನಗ್ನ ಪ್ರದರ್ಶನ, ಜೂಜು ಹಾಗೂ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

# ಮದ್ಯ ಮಾರಾಟ ಮತ್ತು ವಿತರಣೆಗೆ ಅಬಕಾರಿ ಇಲಾಖೆಯಿಂದ ಲಿಖಿತ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು.

# ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸೆನ್ಸ್, ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಪಾಲಿಸಬೇಕು.

# ಸಾರ್ವಜನಿಕ ಸ್ಥಳಗಳಾದ ಬಸ್ಸು ನಿಲ್ದಾಣ, ಉದ್ಯಾನವನ, ಕ್ರೀಡಾಂಗಣಗಳು, ರೈಲ್ವೇ ನಿಲ್ದಾಣಗಳು ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದು ನಿಷೇಧ.

# ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನ ಪ್ರದರ್ಶಿಸಿದರೆ ನಿರ್ದಾಕ್ಷಿಣ್ಯ ಕ್ರಮ.

# ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನ, ತುರ್ತು ವೈದ್ಯಕೀಯ ವಾಹನ ಹಾಗೂ ಇತರ ಭದ್ರತಾ ಕ್ರಮ ಸಂಯೋಜಿಸಿರಬೇಕು.

# ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗೃತಾ ಕ್ರಮ, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಕರು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು.

# ಹೊಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮದ್ಯ ವಿತರಣೆ ವ್ಯವಸ್ಥೆಗೊಳಿಸಿದ್ದರೆ 18 ವರ್ಷ ಕೆಳಗಿನವರಿಗೆ ಪ್ರವೇಶ ನಿಷೇಧಿಸಬೇಕು.

# ಮಹಿಳೆಯರು, ಹೆಣ್ಣು ಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ, ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜನೆಗೊಳ್ಳುತ್ತವೆ.

# ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆಯು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನು ಕ್ರಮ ವಹಿಸಿ ವಾಹನ ಮುಟ್ಟುಗೋಲುಹಾಕಲಾಗುವುದು.

# ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆ ಮತ್ತು ಧ್ವನಿ ಮತ್ತು ಶಬ್ಧ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

# ಸಾರ್ವಜನಿಕ ಹಾಗೂ ಸಮುದ್ರ ಬದಿಗಳಲ್ಲಿ ಮದ್ಯಪಾನ, ಅಶ್ಲೀಲ ವರ್ತನೆ, ಅಶ್ಲೀಲ ಪ್ರದರ್ಶನ ನಿಷೇಧಿಸಲಾಗಿದೆ.

# ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

13 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

13 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

13 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

17 hours ago