ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ, ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12.30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿ ವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ.
ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್‌ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.
ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ, ಸರ್ವೀಸ್‌ಅಪಾರ್ಟ್‌ಮೆಂಟ್, ಕಡಲ ತೀರ, ಹೋಂಸ್ಟೇ, ಮಾಲ್‌ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಬಿ ಡ್ಯಾನ್ಸ್‌ಗಳನ್ನು ನಡೆಸುಂತಿಲ್ಲ. ವಿಶೇಷ ಪಾರ್ಟಿ, ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್‌ಇಲಾಖೆಯ ಅನುಮತಿ ಪಡೆಯಬೇಕು.
ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು, ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.
ದಿನನಿತ್ಯ ನಡೆಯುವ ಕ್ಲಬ್, ಪಬ್, ರೆಸ್ಟೋರೆಂಟ್‌ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್‌ನಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.
ಬೈಕ್ ವೀಲಿಂಗ್, ಯುವತಿಯರ, ಮಹಿಳೆಯರಿಗೆ, ಮಕ್ಕಳಿಗೆ , ವೃದ್ಧರಿಗೆ ಕೀಟಲೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…