Featured

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ – ಜಿಲ್ಲಾಡಳಿತದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ – Vishwanews24

ಡಿ. 31ರ ರಾತ್ರಿ 12.30 ರವರೆಗೆ ಹೊಸ ವರ್ಷಾಚರಣೆಗೆ ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ, ಅಧಿಕೃತ ಕ್ಲಬ್‌, ಪಬ್‌, ರೆಸ್ಟೋರೆಂಟ್‌, ಹೊಟೇಲ್‌ಗ‌ಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12.30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿ ವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ.

ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್‌ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.

ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ, ಸರ್ವೀಸ್‌ಅಪಾರ್ಟ್‌ಮೆಂಟ್‌, ಕಡಲ ತೀರ, ಹೋಂಸ್ಟೇ, ಮಾಲ್‌ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಬಿ ಡ್ಯಾನ್ಸ್‌ಗಳನ್ನು ನಡೆಸುಂತಿಲ್ಲ. ವಿಶೇಷ ಪಾರ್ಟಿ, ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್‌ಇಲಾಖೆಯ ಅನುಮತಿ ಪಡೆಯಬೇಕು.

ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು, ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.

ದಿನನಿತ್ಯ ನಡೆಯುವ ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್‌ನಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.

ಬೈಕ್‌ ವೀಲಿಂಗ್, ಯುವತಿಯರ, ಮಹಿಳೆಯರಿಗೆ, ಮಕ್ಕಳಿಗೆ , ವೃದ್ಧರಿಗೆ ಕೀಟಲೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago