ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೇ ಯುನೈಟೆಡ್ ಕಿಂಗ್‍ಡಮ್‍ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.
ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ ಸಾರ್ವಜನಿಕರ ಪ್ರವೇಶ ವಿಷೇಧಿಸಲಾಗಿದೆ.
ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯರು ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂಬುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…