ಮಂಗಳೂರು : 14 ವರ್ಷದ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ -Vishwanews24

ಮಂಗಳೂರು: ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ) ಬಂಧಿಸಬಹುದಾದ ಅಪರಾಧವಾಗಿದೆ.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ)ಕಾಯ್ದೆ- 1986ರ ತಿದ್ದುಪಡಿ ಕಾಯ್ದೆ-2016ರನ್ವಯ 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಅಲ್ಲದ ಸಂಸ್ಥೆಗಳಲ್ಲಿ ನೇಮಿಸಲು ಅವಕಾಶ ಕಲ್ಪಿಸಿದ್ದು, ನಿಬಂಧನೆಗಳು ಇಂತಿವೆ;

ಕಿಶೋರಾವಸ್ಥೆಯ ಕಾರ್ಮಿಕನನ್ನು ದಿನದ ಸೂಕ್ತ ವೇಳೆಯಲ್ಲಿ 6 ಗಂಟೆಗಳಿಗೂ ಮೀರಿ ದುಡಿಸಿಕೊಳ್ಳುವಂತಿಲ್ಲ, ಕಿಶೋರಾವಸ್ಥೆಯ ಕಾರ್ಮಿಕನನ್ನು ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ದುಡಿಸಿಕೊಳ್ಳುವಂತಿಲ್ಲ ಅಲ್ಲದೇ ಕಡ್ಡಾಯವಾಗಿ ವಾರದ ರಜೆಯನ್ನು ನೀಡಬೇಕು, ಕಾರ್ಮಿಕ ನಿರೀಕ್ಷಕರಿಗೆ, ಕಿಶೋರಾವಸ್ಥೆಯ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿರುವ ಕುರಿತು ಮಾಲೀಕರು 30 ದಿನಗಳ ಒಳಗಾಗಿ ಲಿಖಿತವಾಗಿ ತಿಳಿಸಬೇಕು.

ನಿಬಂಧನೆಗಳನ್ನು ಉಲ್ಲಂಘಿಸಿದ ತಪ್ಪಿತಸ್ಥ ಮಾಲೀಕರಿಗೆ ರೂ. 50 ಸಾವಿರ ದಂಡ ಮತ್ತು 2 ವರ್ಷದವರೆಗೆ ಜೈಲು ಶಿಕ್ಷೆಯೊಂದಿಗೆ ರೂ.20 ಸಾವಿರ ಕಾರ್ಪಸ್ ನಿಧಿ ಪಾವತಿಸಬೇಕಾಗುತ್ತದೆ. ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ -1098 ಅಥವಾ 0824-2433131, 2433132, 2437479, 2435343 ಕ್ಕೆ ಕರೆ ಮಾಡಿಬಹುದು ಎಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago