ಮಂಗಳೂರು: ಆಂಧ್ರಪ್ರದೇಶದಿಂದ ಥೈಲ್ಯಾಂಡ್‌ಗೆ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡಲೆಂದು ಬೈಕಂಪಾಡಿಯ ಕೈಗಾರಿಕಾ ಪ್ರದೇಶದ ಗೋಡೌನ್ ಒಂದರಲ್ಲಿ ವಿದೇಶಕ್ಕೆ ಸಾಗಿಸಲು ಸಂಗ್ರಹಿಟ್ಟಿದ್ದ ರಕ್ತಚಂದನವನ್ನು ಪಣಂಬೂರು ಪೊಲೀಸರು ಹಾಗೂ ಪಣಂಬೂರು ಉಪವಿಭಾಗದ ನಿಗ್ರಹದಳ ವಶಕ್ಕೆ ಪಡೆದು ಐವರನ್ನು ತಂಡ ಬಂಧಿಸಿದೆ.
ಬಂಧಿತರನ್ನು ಕಲ್ಲಾಪು ಪೆರ್ಮನ್ನೂರು ನಿವಾಸಿ ತಬ್ರೇಜ್ (36), ಫಾರೂಕ್ (45) ಹುಸೈನ್ ಕುಂಜಿ (45) ಕಾವೂರಿನ ರಾಕೇಶ್ ಶೆಟ್ಟಿ (44) ಉಳ್ಳಾಲ ತೊಕ್ಕೊಟ್ಟು ನಿವಾಸಿ ಲೋಹಿತ್, ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ, ಬೆಂಗಳೂರು ನಿವಾಸಿ ಪ್ರದೀಪ್ ಎಂಬಾತ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಿಂದ ಎರಡು ಕೋಟಿ ರೂ. ಮೌಲ್ಯದ ನಾಲ್ಕು ಟನ್ ರಕ್ತ ಚಂದನ, ಎರಡು ಕಾರು ಒಂದು ಟೆಂಪೋ ಹಾಗೂ 7 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಎಸ್ಟೇಟ್‍ನ ಕಟ್ಟಡವೊಂದರಲ್ಲಿ ಅಕ್ರಮವಾಗಿ ರಕ್ತಚಂದನವನ್ನು ದಾಸ್ತಾನು ಇರಿಸಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 4 ಸಾವಿರ ಕೆಜಿ ರಕ್ತಚಂದನ ಪತ್ತೆಯಾಗಿದೆ.
ಆರೋಪಿಗಳು ಈ ರಕ್ತ ಚಂದನವನ್ನು ಮಂಗಳೂರಿನ ಎನ್‍ಎಂಪಿಟಿ ಬಂದರು ಮೂಲಕ ವಿದೇಶಕ್ಕೆ ಸಾಗಿಸಲು ತಯಾರಿ ನಡೆಸಿದ್ದು, ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಆರೋಪಿಗಳಿಂದ ರಕ್ತಚಂದನ, ಬ್ರೀಝಾ, ಮಾರುತಿ ಕಾರು ಸಹಿತ ಒಟ್ಟು 2.20 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…