Featured

ಮಂಗಳೂರು : 2023ರ ವರ್ಷ ಸಂಪೂರ್ಣ ಕಾಂಗ್ರೆಸ್ ವರ್ಷ : ಡಿ ಕೆ ಶಿ – Vishwanews24

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪರ ಒಲವು ,

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ;

2023ರ ವರ್ಷ ಸಂಪೂರ್ಣ ಕಾಂಗ್ರೆಸ್ ವರ್ಷ ..

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ..

ಮಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ಚುನಾವಣೆಯ ಫಲಿತಾಂಶವನ್ನು ಗಮನಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಆ ಮೂಲಕ 2023ರ ವರ್ಷ ಸಂಪೂರ್ಣ ‘ಕಾಂಗ್ರೆಸ್ ವರ್ಷ’ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದರು.

ನಗರದಲ್ಲಿ ಡಿ.೦4 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಗಳಲ್ಲಿ, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿ ಬಂದಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ” ಎಂದು ಹೇಳಿದರು

ಇನ್ನು ರಾಮನಗರದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿಸಿದ ಅವರು, “ರಾಮನಗರ ಘಟನೆ ಬಿಜೆಪಿಯ ವಿಶ್ವರೂಪವನ್ನು ತೋರಿಸಿದೆ. ಸಿಎಂ ಹಾಜರಿದ್ದ ಕಾರ್ಯಕ್ರಮದಲ್ಲಿ ಸಚಿವರಾದವರಿಗೆ ಜನರ ಸಮ್ಮುಖದಲ್ಲಿ ಏನು ಮಾತನಾಡಬೇಕು ಎಂಬುದರ ಬಗ್ಗೆ ಅರಿವಿರಬೇಕು. ರಾಮನಗರದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹಾಗಾಗಿ ಕೆಟ್ಟ ಚೌಕಟ್ಟಿನಲ್ಲಿ ಕಾಂಗ್ರೆಸ್‌ನ್ನು ಜನರ ಮುಂದೆ ಬಿಂಬಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.

ಇನ್ನು ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು,”ಬಿಜೆಪಿಯೂ ಸಚಿವರುಗಳನ್ನು ಕರೆದು ರಥಯಾತ್ರೆ ನಡೆಸುವುದು, ಚುನಾವಣೆಗಳನ್ನು ನಡೆಸುವುದು ಮಾಡುತ್ತಿದೆ. ಅವರಿಗೆ ಬೇಕಾದಂತೆ ವರ್ತಿಸುವ ಸರ್ಕಾರ, ಕಾಂಗ್ರೆಸ್ ಮಾಡಿದರೆ ಮಾತ್ರ ತಪ್ಪು ಎನ್ನುತ್ತಿದೆ. ಅಧಿಕಾರ ದುರುಪಯೋಗಪಡಿಸಿ ಹೇಗಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ತಡೆಯಲು ಯತ್ನಿಸುತ್ತಿದ್ದಾರೆ. ಸಿಎಂ ಕೇಂದ್ರದ ಅನುಮತಿ ಪಡೆದು ಮೇಕೆದಾಟು ಕಾಮಗಾರಿಯನ್ನು ನಾಳೆಯೇ ಆರಂಭಿಸಲಿ, ಆಗ ನಾವು ಅವರನ್ನು ಬೆಂಬಲಿಸುತ್ತೇವೆ” ಎಂದು ಹೇಳಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

12 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

13 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago