Featured

ಮಂಗಳೂರು:  2024ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ – vishwanews24

ಮಂಗಳೂರು:  2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು: 2024ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಡಿಪ್ಲೋಮಾ, ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಜನವರಿ 6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಕಚೇರಿಯಲ್ಲಿ ಮತ್ತುನಗರದ ಮಹಾನಗರಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾಉದ್ಯೋಗ ವಿನಿಮಯ ಕಚೆೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಅರ್ಹತೆ: 2023-24ನೇ ಸಾಲಿನಲ್ಲಿಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣ ರಾಗಿ 6 ತಿಂಗಳವರೆಗೆ ಉದ್ಯೋಗ ಸಿಗದವರು ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಯು ರಾಜ್ಯದಲ್ಲಿ ಕನಿಷ್ಠ ಆರು ವರ್ಷಗಳವರೆಗೆ ಪದವಿ ಡಿಪ್ಲೋಮಾ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡಿರಬೇಕು.ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ ಮೂಲಕ ಲಾಗಿನ್ ಆಗಿ ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್‌ ಆದ ಆಧಾರ ಸಂಖ್ಯೆಯ ಬ್ಯಾಂಕ್‌ ಖಾತೆಯನ್ನು ಕಡ್ಡಾಯ ವಾಗಿ ಹೊಂದಿರಬೇಕು.ಅಭ್ಯರ್ಥಿಗಳು ಯೋಜನೆಯ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಸೇವಾಸಿಂಧು ವೆಬ್‌ಸೈಟ್ ಮೂಲಕ ಸ್ವಯಂ ಘೋಷಣೆಯನು ಕಡ್ಡಾಯವಾಗಿ ಮಾಡಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ,ದೂರವಾಣಿ ಸಂಖ್ಯೆ: 0824-2457139 ಅಥವಾ ಸಹಾಯವಾಣಿ: 18005999918 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

18 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

18 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

18 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

21 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

21 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

21 hours ago