Featured

ಮಂಗಳೂರು: 21ನೇ ವಯಸ್ಸಿಗೆ ಪೈಲಟ್‌ ಕನಸು ನನಸಾಗಿಸಿದ ಹನಿಯಾ ಹನೀಫ್ – Vishwanews24

ಮಂಗಳೂರು: 21ನೇ ವಯಸ್ಸಿಗೆ ಪೈಲಟ್‌ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದ ಹನಿಯಾ ಹನೀಫ್

ಮಂಗಳೂರು: ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತಿಯಾದ ಹನಿಯಾ ಹನೀಫ್ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದು ಅಧಿಕೃತ ಪೈಲಟ್ ಆಗಿದ್ದಾರೆ.

ಇನ್ನು ಹನಿಯಾ ಅವರು 9ನೇ ತರಗತಿವರೆಗೆ ದುಬೈನ ‘ದಿ ಇಂಡಿಯನ್ ಹೈಸ್ಕೂಲ್’ನಲ್ಲಿ ಓದಿದ್ದು. ಬಳಿಕ ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಹತ್ತನೇ ತರಗತಿ ಹಾಗೂ ಪಿಯು ಶಿಕ್ಷಣವನ್ನು ಮಹೇಶ್ ಪದವಿ ಪೂರ್ವ ಕಾಲೇಜಿನಲ್ಲಿ ಪೂರ್ತಿಗೊಳಿಸಿದ್ದರು.ಚಿಕ್ಕಂದಿನಿಂದಲೆ ವಿದೇಶಕ್ಕೆ ಹೋಗುತ್ತಿದ್ದ ಕಾರಣ ವಿಮಾನಗಳ ಹಾರಾಟ ಕಂಡು ಪೈಲೆಟ್ ಹಾಗಬೇಕು ಎಂದು ಹನಿಯಾ ದೃಢ ನಿರ್ಧಾರಕ್ಕೆ ಬಂದಿದ್ದರು.

ತನ್ನ ಪಿಯುಸಿ ಶಿಕ್ಷಣದ ಬಳಿಕ ಮೈಸೂರಿನ ಒರಿಯಂಟ್ ಫ್ಲೈಟ್ಸ್ ಏವಿಯೇಷನ್ ಅಕಾಡಮಿಯಲ್ಲಿ ಪೈಲಟ್ ತರಬೇತಿಗೆ ಸೇರಿ ಮೂರೂವರೆ ವರ್ಷ ತರಬೇತಿ ಪಡೆದು,  200 ತಾಸುಗಳ ಕಾಲ ವಿಮಾನ ಹಾರಾಟ ನಡೆಸಿದ ಬಳಿಕ ಕಮರ್ಶಿಯಲ್ ಪೈಲಟ್ ಪರವಾನಿಗೆಯನ್ನು ಹನಿಯಾ ತನ್ನದಾಗಿಸಿಕೊಂಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಹನಿಯಾ, ಪೈಲೆಟ್ ಹಾಗಬೇಕೆಂದು‌ ನಾನು ದೃಢ ನಿರ್ಧಾರಕ್ಕೆ ಚಿಕ್ಕವಿರುವಾಗ ಬಂದಿದ್ದೆ. ನಾನು ವಿಮಾನದಲ್ಲಿ ದುಬೈಗೆ ಪ್ರಯಾಣ ಮಾಡುತ್ತಿದ್ದ ಕಾರಣ ನಾನು ಪ್ರೇರಿತಳಾದೆ. ಪೈಲೆಟ್ ತರಬೇತಿ ಸುಲಭವಲ್ಲ, ಅದರಲ್ಲೂ ಮಹಿಳೆಯರಿಗಂತೂ ಈ ರಂಗದಲ್ಲಿ ಪ್ರೋತ್ಸಾಹ ನೀಡಲು ಪೋಷಕರು ಬಹಳ ಹಿಂಜರಿಯುತ್ತಾರೆ. ಆದರೆ ನನಗೆ ನನ್ನ ಪೋಷಕರಿಂದ ಸಿಕ್ಕಿದ ಬೆಂಬಲ ಹಾಗೂ ಪ್ರೋತ್ಸಾಹ ನನಗೆ ಮುಂದುವರಿಯಲು ಸಾಧ್ಯವಾಗಿದೆ ಎಂದರು.

ಇನ್ನು ಹನಿಯಾ ಸಣ್ಣ ವಯಸ್ಸಿನಲ್ಲೇ ನಾನು ಪೈಲಟ್ ಆಗುತ್ತೇನೆ ಎಂದು ಹೇಳುತ್ತಿದ್ದಳು. ಅದಕ್ಕೆ‌ ನಾವು ಬೆಂಬಲ್ ನೀಡಿದ್ದೇವೆ. ಇದೀಗ ಮಗಳು ಗುರಿಯನ್ನು ಯಶಸ್ವಿಯಾಗಿ ತಲುಪಿರುವುದು ಸಂತಸ ತಂದಿದೇ ಎಂದು ಹನಿಯಾ ತಾಯಿ ನಾಝಿಯಾ ಹೇಳಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago