ಮಂಗಳೂರು: ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಇತನ ವಿರುದ್ದ ಪಾಂಡೇಶ್ವರ ಪೊಲೀಸ್ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015ನೇ ಇಸವಿಯಲ್ಲಿ ಆಫ್ರಿಕಾದ ಮೊರಾಕೋ ದೇಶದಲ್ಲಿ ಆತನನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿತ್ತು.
ಘಟನೆಯ ವಿವರ:
2000ನೇ ಇಸವಿಯಲ್ಲಿ ಬಂಟ್ಸ್ ಹಾಸ್ಟೆಲ್ ನಿವಾಸಿ ಇರವಿನ್ ಪಿಂಟೋ ಮತ್ತು ಅವರ ಪತ್ನಿ ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ಪ್ರಕರಣ ದಾಖಲಾಗಿತ್ತು.
2004ನೇ ಇಸವಿಯಲ್ಲಿ ರೋಹನ್ ಕಾರ್ಪೋ ರೇಶನ್ ಮಾಲಕ ರೋಹನ್ ಮೊಂತೇರೋ ಅವರ ಕಚೇರಿಯ ಮೇಲೆ ಅಪರಿಚಿತರು ಗುಂಡು ಹಾರಿಸಿ, ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಬನ್ನಂಜೆರಾಜ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
2011ರಲ್ಲಿ ಪೃಥ್ವಿ ಡೆವಲಪರ್ಸ್ ಮತ್ತು ಬಿಲ್ದರ್ಸ್‌ನ ಮಾಲಕ ಸುರೇಶ ಭಂಡಾರಿ ಅವರು ತನ್ನ ಹೆಂಡತಿ ಮತ್ತು ಮಗಳೊಂದಿಗೆ ಕದ್ರಿ ಪಾರ್ಕ್ ಬಳಿ ಕಾರಿನಲ್ಲಿದ್ದ ಸಮಯ ಇಬ್ಬರು ಅಪರಿಚಿತರು ಬೆ„ಕ್‌ನಲ್ಲಿ ಬಂದು ರಿವಾಲ್ವರ್‌ನಿಂದ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬನ್ನಂಜೆ ರಾಜಾನ ಬಂಧನದ ಬಳಿಕ ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಮೂರೂ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾತಿ ಅವರು ಬನ್ನಂಜೆ ರಾಜನನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿದ್ದಾರೆ.
ಆರೋಪಿ ಪರವಾಗಿ ಪಿ.ಪಿ ಹೆಗ್ಡೆ ಅಸೋಸಿಯೇಟ್‌ನ ರಾಜೇಶ್‌ಕುಮಾರ್ ಅಮ್ಟಾಡಿ ಅವರು ವಾದಿಸಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…