ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.
ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂಬ ಅಭಿಪ್ರಾಯ ಅಧಿಕಾರಿಗಳು, ಆಡಳಿತ ಮಂಡಳಿಯಿಂದ ವ್ಯಕ್ತವಾಯಿತು.
ದಿನನಿತ್ಯ ಶಾಲೆಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣ ಕುರಿತಂತೆ ಮಾಹಿತಿ ಪಡೆದು, ಅದರಂತೆ ಶಿಕ್ಷಣ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಒಂದು ವಾರದ ಬಳಿಕ ಮತ್ತೊಂದು ಸುತ್ತಿನಲ್ಲಿ ಶಾಲಾ ಆಡಳಿತ ಮಂಡಳಿ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…