Featured

ಮಂಗಳೂರು:  5 ಗ್ಯಾರಂಟಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ : ರಮಾನಾಥ ರೈ – Vishwanews24

ಮಂಗಳೂರು: 5 ಗ್ಯಾರಂಟಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ : ರಮಾನಾಥ ರೈ

ಮಂಗಳೂರು: ಮತದಾನದ ಸಂದರ್ಭ ಕೈಬೆರಳಿಗೆ ಹಾಕಿದ್ದ ಶಾಯಿಯ ಗುರುತು ಮಾಸುವ ಮುನ್ನವೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭ ನೀಡಿದ್ದ ಭರವಸೆಯ ‘ಗ್ಯಾರಂಟಿ’ಗಳನ್ನು ಅಧಿಕಾರಕ್ಕೇರಿದ ಎರಡೇ ವಾರದಲ್ಲಿ ಜಾರಿಗೊಳಿಸುವ ಮೂಲಕ ದೇಶದಲ್ಲೇ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಕ್ರಮದಿಂದ ಬಿಜೆಪಿಯು ಸಂಪೂರ್ಣವಾಗಿ ತತ್ತರಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಯಾವ ರಾಜ್ಯದಲ್ಲೂ ಇಂತಹ ಗ್ಯಾರಂಟಿಗಳ ಅನುಷ್ಠಾನವಾಗಿಲ್ಲ. ನಮ್ಮದು ನುಡಿದಂತೆ ನಡೆಯುವ ಸರಕಾರವಾಗಿದೆ. ಇತಿಹಾಸದ ಪುಟದಿಂದ ಈ ದಿಟ್ಟ ಕ್ರಮವನ್ನು ಎಂದಿಗೂ ಅಳಿಸಲಾಗದು. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದ ಬಿಜೆಪಿಗರು ಕಾಂಗ್ರೆಸ್ ಅಧಿಕಾರಕ್ಕೇರಿದಾಗ ತಕ್ಷಣ ಗ್ಯಾರಂಟಿ ಜಾರಿಗೆ ತನ್ನಿ ಎನ್ನುವ ಮೂಲಕ ದ್ವಂದ ನಿಲುವು ತಾಳಿದ್ದರು. ಇದೀಗ ಕಾಂಗ್ರೆಸ್ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಬಿಜೆಪಿ ಉತ್ತರಿಸಲಾಗದೆ ತತ್ತರಿಸಿದೆ ಎಂದರು.

ಉಚಿತ ಭಾಗ್ಯಗಳನ್ನು ಕೊಡುವುದರಿಂದ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ದನ ಪೂಜಾರಿ ಸಾಲಮೇಳ ಮಾಡಿದಾಗಲೂ ಬಿಜೆಪಿಗರು ಟೀಕಿಸಿದ್ದರು. ಉಚಿತ ಅಕ್ಕಿ ಕೊಡುವಾಗಲೂ ಆಕ್ಷೇಪಿಸಿದ್ದರು. ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕಿದ್ದ ಬಿಜೆಪಿಗರು ಬಂಡವಾಳ ಶಾಹಿಗಳ ಸಾವಿರಾರು ಕೋಟಿ ರೂ. ಸಾಲವನ್ನು ಮನ್ನಾ ಮಾಡಿದನ್ನು ಮರೆಯಲು ಸಾಧ್ಯವಿಲ್ಲ. ಆರು ತಿಂಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತರುವೆವು. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ತುಂಬುವೆವು ಎಂದಿದ್ದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿ ಒಂಭತ್ತು ವರ್ಷಗಳಾದರೂ ಆ ಭರವಸೆಯನ್ನು ಈಡೇರಿಸಿಲ್ಲ. ಆದರೆ ಮತದಾನದ ಸಂದರ್ಭ ಕೈಬೆರಳಿಗೆ ಹಾಕಿದ್ದ ಶಾಯಿಯ ಗುರುತು ಮಾಸುವ ಮುನ್ನವೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ರಮಾನಾಥ ರೈ ಹೇಳಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago