ಮಂಗಳೂರು: ಶಾಲೆಗೆ ತೆರಳುತ್ತಿದ್ದ 9ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ 23 ವರ್ಷದ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ಸೋಮೇಶ್ವರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಬಾಲಕಿಯನ್ನು ರಕ್ಷಿಸಲಾಗಿದೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಮೇಸ್ತ್ರಿ ಗೂಡುಸಾಬ್ ಅಲಿಯಾಸ್ ಆಶಿಫ್ (23) ಎಂದು ಗುರುತಿಸಲಾಗಿದೆ.
ಬಾಗಲಕೋಟೆ ಮೂಲದ ಕುಟುಂಬವೊಂದು ಉಳ್ಳಾಲ ತಾಲೂಕಿನ ಕಲ್ಲಾಪು ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಕುಟುಂಬದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸಮೀಪದ ಕನ್ನಡ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ಪೋಷಕರು ಎಂದಿನಂತೆ ಇಬ್ಬರು ಮಕ್ಕಳನ್ನೂ ಶಾಲೆಗೆ ಕಳುಹಿಸಿದ್ದರು. ಆದರೆ, ಬಳಿಕ ಶಿಕ್ಷಕರು ಪೋಷಕರಿಗೆ ಕರೆ ಮಾಡಿ, ಸಹೋದರಿಯರಲ್ಲಿ ಹಿರಿಯ ಬಾಲಕಿ ಶಾಲೆಗೆ ಬಂದಿಲ್ಲ ಎಂದು ಮಾಹಿತಿ ನೀಡಿದರು. ಇದರಿಂದ ಆತಂಕಗೊಂಡ ಪೋಷಕರು ಬಾಲಕಿಗಾಗಿ ಹುಡುಕಾಟ ಆರಂಭಿಸಿದರು.
ಕಾಣೆಯಾದ ಬಾಲಕಿ ಈ ಹಿಂದೆಯೇ ತನ್ನ ತಾಯಿಗೆ ಆರೋಪಿ ಗೂಡುಸಾಬ್ ಅಲಿಯಾಸ್ ಆಶಿಫ್ ಶಾಲೆಯ ಬಳಿ ತನ್ನನ್ನು ಹಿಂಬಾಲಿಸುತ್ತಿದ್ದಾನೆ ಹಾಗೂ ಮಾತನಾಡಲು ಪ್ರಯತ್ನಿಸುತ್ತಿದ್ದಾನೆ ಎಂದು ತಿಳಿಸಿದ್ದಳು ಎನ್ನಲಾಗಿದೆ. ಈ ಕುರಿತು ಆರೋಪಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ವರದಿಯಾಗಿದೆ. ಆದರೂ, ಆರೋಪಿ ಬಾಲಕಿಯನ್ನು ಆಮಿಷವೊಡ್ಡಿ ಕಾರಿನಲ್ಲಿ ಕರೆದೊಯ್ದು ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಮಂಗಳವಾರ ಸಂಜೆ ಬಾಲಕಿಯ ತಾಯಿ ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಮಗಳನ್ನು ಪತ್ತೆಹಚ್ಚಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮಂಗಳವಾರ ರಾತ್ರಿ ಸೋಮೇಶ್ವರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಬಾಲಕಿಯನ್ನು ರಕ್ಷಿಸಿದರು. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.
ಉಡುಪಿ: ಬಾಡಿಗೆ ಮನೆಯ ಹಣದ ವಿವಾದ : ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ ; ಆರೋಪಿ ಬಂಧನ ಉಡುಪಿ:…
ಅಗ್ರಿಗೋಲ್ಡ್ ವಂಚನೆ ಪ್ರಕರಣ: ಉಡುಪಿಯಲ್ಲಿ ಎಸ್‌ಪಿ ಕಚೇರಿಯಲ್ಲಿ 600ಕ್ಕೂ ಅಧಿಕ ಸಂತ್ರಸ್ತರು ಸಂತ್ರಸ್ತರ ಬಾಂಡ್ ಪರಿಶೀಲನೆಗೆ ಉಡುಪಿ ಎಸ್‌ಪಿ ಕಚೇರಿಯಲ್ಲಿ…
ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ ... ಪ್ರತಿ ಗಂಟೆಗೆ 150 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಆಂಧ್ರಪ್ರದೇಶ, ಒಡಿಶಾದ…
ಉಡುಪಿ: ಅಗ್ರಿಗೋಲ್ಡ್ ಕೋಟ್ಯಂತರ ರೂ. ವಂಚನೆ ಪ್ರಕರಣ: ಉಡುಪಿ ಎಸ್ಪಿ ಕಚೇರಿಗೆ ಮುಗಿಬಿದ್ದ ಸಂತ್ರಸ್ತರು ಉಡುಪಿ: ಆಂಧ್ರಪ್ರದೇಶ ಮೂಲದ ಅಗ್ರಿಗೋಲ್ಡ್…
ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್ ನವದೆಹಲಿ :ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ…
ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿ…