ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಬಂದಿರುವ ಭಟ್ಕಳ ಮೂಲದ ಈತನನ್ನು ಪರಿಶೀಲಿಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಸುಗಂಧ ದ್ರವ್ಯಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಸಹಿತ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯಿಂದ 24 ಕ್ಯಾರೆಟ್ ನ 201.200 ಗ್ರಾಂ ತೂಕದ 9,57,712 ರೂ. ಮೌಲ್ಯದ ಚಿನ್ನದ ಬಿಲ್ಲೆಗಳು, 24 ಗ್ರಾಂ ತೂಕದ 1,04,640 ರೂ. ಮೌಲ್ಯದ ಚಿನ್ನದ ನಾಣ್ಯಗಳು, 1,02,600 ರೂ. ಮೌಲ್ಯದ ಆ್ಯಪಲ್ ಐಫೋನ್, 1,69,500 ರೂ. ಮೌಲ್ಯದ ಸುಗಂಧ ದ್ರವ್ಯದ 12 ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…