Featured

ಮಂಗಳೂರು : SSLC ಫಲಿತಾಂಶ ಕುಸಿಯಲು ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿರುವುದೇ ಕಾರಣ : ಬಿ.ಕೆ ಹರಿಪ್ರಸಾದ್ – VIshwanews24

ನಕಲಿ ದೇಶ ಭಕ್ತರು ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ..

ಮಂಗಳೂರು, : ಹಿಂದೆ ಎಸ್ಎಸ್ಎಲ್ ಸಿ, ಪಿಯುಸಿ ಫಲಿತಾಂಶ ಬರುವ ವೇಳೆ ಅವಿಭಜಿತ ದ.ಕ.ಜಿಲ್ಲೆ ಮೇಲುಗೈ ಎಂದು ಪತ್ರಿಕೆಯಲ್ಲಿ ಬರುತ್ತಿತ್ತು. ಆದರೆ ಇದೀಗ ವಿದ್ಯಾರ್ಥಿಗಳ ಫಲಿತಾಂಶವು 20ನೇ ಸ್ಥಾನಕ್ಕೆ ಕುಸಿದಿದೆ.

ಇದಕ್ಕೆ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿರುವುದೇ ಕಾರಣ. ಆದ್ದರಿಂದ ಎಲ್ಲರೂ ಎಚ್ಚರವಹಿಸಿ ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

ನಕಲಿ ದೇಶ ಭಕ್ತರು ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ದೇಶದ ಉನ್ನತಿಗಾಗಿ ಮತ್ತೆ ಶಿಕ್ಷಣಕ್ಕೆ ಆದ್ಯತೆ ನೀಡಿ ಮರಳಿ ನಂ.1 ಸ್ಥಾನಕ್ಕೆ ಕರಾವಳಿ ಜಿಲ್ಲೆಗಳನ್ನು ಕೊಂಡೊಯ್ಯಬೇಕಿದೆ ಎಂದರು.

ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ನಗರದ ಬೋಳಾರದ ಶಾದಿಮಹಲ್ ನಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ದ.ಕ.ಜಿಲ್ಲೆಯಲ್ಲಿ ನಕಲಿ‌ ದೇಶ ಭಕ್ತರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ.

ಕೇವಲ ಒಂದೇ ಧರ್ಮದವರು ಈ ದೇಶಕ್ಕೆ ಕೊಡುಗೆ ಕೊಟ್ಟಿಲ್ಲ. ಸಾವಿತ್ರಿ ಬಾಯಿ ಪುಲೇ, ಫಾತಿಮಾ ಶೇಖ್ ಅವರು ದೇಶದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಲೆಂದು 18ನೇ ಶತಮಾನದಲ್ಲಿಯೇ ಹೋರಾಟ ಮಾಡಿದ್ದಾರೆ‌. ಇವರು ಯಾವುದೇ ಆಸೆ-ಆಕಾಂಕ್ಷೆಯನ್ನಿರಿಸಿ, ಧರ್ಮದ ಹೆಸರಿನಲ್ಲಿ ಈ ಹೋರಾಟವನ್ನು ಮಾಡಿಲ್ಲ. ಎಲ್ಲರೂ ಸಾಕ್ಷರತಾರಾಗಬೇಕೆಂದು ಈ ಹೋರಾಟ ಮಾಡಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago