ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಮೃತಪಟ್ಟಿದೆ.
ಈ ಬಗ್ಗೆ ರಕ್ಷಣಾ ತಂಡದ ಭಾಗವಾಗಿರುವ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ ಮಾಹಿತಿ ನೀಡಿದ್ದು, ಒಂದು ಮಗು ಮೃತಪಟ್ಟಿದೆ. ಅವಶೇಷಗಳಡಿ ಸಿಲುಕಿರುವ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಕ್ಕಳ ತಾಯಿ ಅಶ್ವಿನಿ ಉಸಿರಾಡುತ್ತಿದ್ದು, ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೃತಪಟ್ಟಿರುವ ಮಗುವನ್ನು ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ತಾಯಿ ಮತ್ತು ಇನ್ನೊಂದು ಮಗುವಿನ ರಕ್ಷಣಾ ಕಾರ್ಯ ಮುಂದುವರಿದಿದೆ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೀತಾರಾಮರ ಪತ್ನಿ ಅಶ್ವಿನಿ ಹಾಗೂ 3 ಹಾಗೂ 2 ವರ್ಷದ ಇಬ್ಬರು ಮಕ್ಕಳು ಕುಸಿದ ಮಣ್ಣು ಮತ್ತು ಮನೆಯ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಪೈಕಿ ಒಂದು ಮಗು ಸಾವನ್ನಪ್ಪಿದ್ದರೆ, ತಾಯಿ ಹಾಗೂ ಇನ್ನೊಂದು ಜೀವನ್ಮರಣ ಹೋರಾಟ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ವೈದ್ಯರ ತಂಡವು ಅವರಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…