Featured

ಮಂಜನಾಡಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು -ಮೃತರ ಸಂಖ್ಯೆ 2ಕ್ಕೆ ಏರಿಕೆ – vishwanews24

ತಾಯಿ, ಇನ್ನೊಂದು ಮಗುವಿನ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ

ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಮೃತಪಟ್ಟಿದೆ.

ಈ ಬಗ್ಗೆ ರಕ್ಷಣಾ ತಂಡದ ಭಾಗವಾಗಿರುವ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ ಮಾಹಿತಿ ನೀಡಿದ್ದು, ಒಂದು ಮಗು ಮೃತಪಟ್ಟಿದೆ. ಅವಶೇಷಗಳಡಿ ಸಿಲುಕಿರುವ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಕ್ಕಳ ತಾಯಿ ಅಶ್ವಿನಿ ಉಸಿರಾಡುತ್ತಿದ್ದು, ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೃತಪಟ್ಟಿರುವ ಮಗುವನ್ನು ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ತಾಯಿ ಮತ್ತು ಇನ್ನೊಂದು ಮಗುವಿನ ರಕ್ಷಣಾ ಕಾರ್ಯ ಮುಂದುವರಿದಿದೆ.

ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೀತಾರಾಮರ ಪತ್ನಿ ಅಶ್ವಿನಿ ಹಾಗೂ 3 ಹಾಗೂ 2 ವರ್ಷದ ಇಬ್ಬರು ಮಕ್ಕಳು ಕುಸಿದ ಮಣ್ಣು ಮತ್ತು ಮನೆಯ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಪೈಕಿ ಒಂದು ಮಗು ಸಾವನ್ನಪ್ಪಿದ್ದರೆ, ತಾಯಿ ಹಾಗೂ ಇನ್ನೊಂದು ಜೀವನ್ಮರಣ ಹೋರಾಟ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ವೈದ್ಯರ ತಂಡವು ಅವರಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

50 minutes ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

4 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

8 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

8 hours ago