ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ – vishwanews24

Featured, ರಾಷ್ಟ್ರ ನ್ಯೂಸ್

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ

ಕಾಸರಗೋಡು:‌ ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾರವರನ್ನು ಮನೆಗೆ ಕರೆಸಿದ್ದಾನೆ ಎನ್ನಲಾಗಿದೆ.

ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತಕ್ಕೆ ಕಾರಣ ತಿಳಿದು ಬಂದಿಲ್ಲ.ಮೃತದೇಹ ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ – vishwanews24

ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ತಲುಪಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

.

Leave a Reply